Wednesday, 11th December 2024

ರೈತರಿಗೆ ತೆರಿಗೆರಹಿತ ನೀಡಲಾಗುವ ಡೀಸೆಲ್ ಪ್ರಮಾಣ ಹೆಚ್ಚಳ

2023-24ನೇ ಹಣಕಾಸು ವರ್ಷದ ಬಜೆಟ್: ರ್ನಾಟಕ ರಾಜ್ಯ ಮುಖ್ಯಮಂತ್ರಿ, ಹಣಕಾಸು ಸಚಿವ ಬಸವರಾಜ ಬೊಮ್ಮಾಯಿ 2023-24ನೇ ಹಣಕಾಸು ವರ್ಷದ ಬಜೆಟ್ ಮಂಡನೆಯನ್ನು ಆರಂಭಿಸಿದ್ದಾರೆ. ಈ ಬಜೆಟ್‌ ಮಂಡನೆ ವೇಳೆ ರೈತರಿಗೆ ಬಂಪರ್‌ ಕೊಡುಗೆಯನ್ನು ಘೋಷಣೆ ಮಾಡಿದ್ದಾರೆ.

ರೈತರಿಗೆ ತೆರಿಗೆರಹಿತ ನೀಡಲಾಗುವ ಡೀಸೆಲ್ ಪ್ರಮಾಣವನ್ನು ಹೆಚ್ಚಿಸುವ ನಿರ್ಧಾರವನ್ನು ಬಜೆಟ್ ಮಂಡನೆ ವೇಳೆ ಘೋಷಿಸಿದ್ದಾರೆ.

ರೈತರಿಗೆ ತೆರಿಗೆ ಇಲ್ಲದೆ ನೀಡಲಾಗುವ ಡೀಸೆಲ್ ಪ್ರಮಾಣವನ್ನು 1.5 ಲಕ್ಷ ಕಿಲೋ ಲೀಟರ್‌ನಿಂದ 2 ಲಕ್ಷ ಕಿಲೋ ಲೀಟರ್‌ಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಎಲ್ಲ ಯಾಂತ್ರೀಕೃತ ಬೋಟ್‌ಗಳಲ್ಲಿ ಇಸ್ರೋ ಅಭಿವೃದ್ಧಿ ಪಡಿಸಿದ ಜಿಯೋ-ಪೊಸಿಷನಿಂಗ್ ತಂತ್ರಜ್ಞಾನವನ್ನು ಅಳವಡಿಸಲಾಗುವುದು. ಕರಾವಳಿಯ ಉಡುಜಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ಸೀಫುಡ್ ಪಾರ್ಕ್ ಆರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಬಜೆಟ್ ಆರಂಭದಲ್ಲಿಯೇ ರೈತರಿಗೆ ಬಂಪರ್ ಗಿಫ್ಟ್ ಘೋಷಣೆ ಮಾಡಲಾಗಿದೆ. ರೈತರಿಗೆ 5 ಲಕ್ಷ ರೂಪಾಯಿ ಸಾಲ ನೀಡುವ ಘೋಷಣೆ ಮಾಡಲಾಗಿದೆ. ಶೂನ್ಯ ಬಡ್ಡಿದರದಲ್ಲಿ ಸಾಲವನ್ನು ನೀಡುವ ಘೋಷಣೆ ಮಾಡಲಾಗಿದೆ. ಸಾಲ ಮಿತಿಯನ್ನು 3 ಲಕ್ಷ ರೂಪಾಯಿ ಯಿಂದ 5 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ.

ಸೀಮೆ ಎಣ್ಣೆ ಆಧಾರಿತ ದೋಣಿಗಳನ್ನು ಪೆಟ್ರೋಲ್ ದೋಣಿಗಳನ್ನಾಗಿ ಪರಿವರ್ತನೆ ಮಾಡಲು 40 ಕೋಟಿ ರೂಪಾಯಿ ಘೋಷಿಸಿದ ಮುಖ್ಯಮಂತ್ರಿ ಈ ಪರಿವರ್ತನೆ ಆಗುವವರೆಗೂ ಸೀಮೆಎಣ್ಣೆ ಸಹಾಯಧನ ಮುಂದುವರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.