Wednesday, 11th December 2024

Gruhalakshmi Scheme: ಅ.7, 9ಕ್ಕೆ ಎರಡು ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ಅಕೌಂಟ್‌ಗೆ ಲಕ್ಷ್ಮೀ ಹೆಬ್ಬಾಳಕರ್ ಘೋಷಣೆ

Lakshmi Hebbalkar

ಬೆಳಗಾವಿ: ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಹಣ ಇದೇ ಅ.7 ಮತ್ತು 9 ರಂದು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಹೇಳಿದ್ದಾರೆ. ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ ಗುರುವಾರ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿ, ಮಾತನಾಡಿದ ಸಚಿವರು, ರಾಜ್ಯದ ಯಜಮಾನಿಯರ ಖಾತೆಗೆ ಎರಡೂ ಕಂತಿನ ಹಣವನ್ನು ಹಾಕಲಾಗುವುದು. ಕೆಲವೊಂದು ತಾಂತ್ರಿಕ ಕಾರಣಗಳಿಂದ ಹಣ‌ ಹಾಕುವುದು ವಿಳಂಬವಾಗಿತ್ತು ಎಂದರು.

ಈ ಸುದ್ದಿಯನ್ನೂ ಓದಿ | Dasara Gombe Habba 2024: ಮಾರುಕಟ್ಟೆಯಲ್ಲಿ ದಸರಾ ಗೊಂಬೆಗಳ ಕಲರವ!

ಯಾರೂ ಆತಂಕ ಪಡುವ ಅಗತ್ಯವಿಲ್ಲ

ಈ ಲಕ್ಷ್ಮೀ ಹೆಬ್ಬಾಳಕರ್ ಹಿಡಿದ ಕೆಲಸವನ್ನು ಮಾಡದೇ ಬಿಡುವುದಿಲ್ಲ ಎಂದು ಮೊನ್ನೆ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಸಮಾರಂಭದಲ್ಲಿ ಸ್ವತಃ ಮುಖ್ಯಮಂತ್ರಿಗಳೇ ನನ್ನ ಬಗ್ಗೆ ಹೇಳಿದ್ದಾರೆ. ಈ ಹೆಣ್ ಮಗಳು ತುಂಬಾ ಕಿಲಾಡಿ, ಹಠ ಮಾಡಿ‌ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ‌ ತಂದಿದ್ದೇ ಲಕ್ಷ್ಮೀ ಹೆಬ್ಬಾಳಕರ್ ಅಂತ ಸಿಎಂ ಸಿದ್ದರಾಮಯ್ಯ ನನ್ನ ಬಗ್ಗೆ ಹೇಳಿದ್ದಾರೆ. ಹೀಗಾಗಿ ಗೃಹಲಕ್ಷ್ಮಿ ಯೋಜನೆ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಪಟ್ಟು ಹಿಡಿದು ಯೋಜನೆ ಮಾಡಿಸಿದ್ದೇನೆ. ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುತ್ತಿದ್ದೇನೆ ಎಂದು ಸಚಿವರು ಹೇಳಿದರು.

ಈ ಸುದ್ದಿಯನ್ನೂ ಓದಿ | Karnataka Rain: ನಾಳೆ ಬೆಂಗಳೂರು, ಹಾಸನ, ತುಮಕೂರು ಸೇರಿ ವಿವಿಧೆಡೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ನವರಾತ್ರಿ ಹಬ್ಬದ ವೇಳೆ ಎರಡು ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ನಿಮಗೆಲ್ಲಾ (ಫಲಾನುಭವಿ ಮಹಿಳೆಯರು) ಬರುತ್ತಿದ್ದು, ಹಣ ಸಿಕ್ಕ ಬಳಿಕ‌ ಭರ್ಜರಿಯಾಗಿ ಹೋಳಿಗೆ ಊಟ ಮಾಡಿ. ಅದೇ ನನಗೆ ಸಂತೋಷ ಎಂದು‌ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.