Saturday, 14th December 2024

ವಾಯುಭಾರ ಕುಸಿತ: ಮೂರು ದಿನ ಭಾರಿ ಮಳೆ ಸಂಭವ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಬುಧವಾರದಿಂದ ಮೂರು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಂಭವವಿದೆ ಎನ್ನಲಾಗಿದೆ.

ಬುಧವಾರದಿಂದ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಅಧಿಕ ಪ್ರಮಾಣದ ಮಳೆಯಾಗಲಿದೆ ಎಂದು ತಿಳಿಸಿದೆ. ಶಿವಮೊಗ್ಗ, ಕೊಡಗು, ರಾಮನಗರ, ಮೈಸೂರು, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬುಧವಾರ ಆರಂಭಗೊಂಡು, ಆ.20ರವರೆಗೂ ಮಳೆ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ವರದಿ ತಿಳಿಸಿದೆ.

ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಬೆಂಗಳೂರು ನಗರ ಪ್ರದೇಶದಲ್ಲಿ ಬುಧವಾರ ಸಂಜೆ ವೇಳೆಗೆ ಮಳೆ ಆರಂಭವಾಗ ಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲಿ ಅಧಿಕ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಯಲ್ಲಿ ಮಳೆ ತೀವ್ರತೆ ಹೆಚ್ಚಾಗಲಿದೆ ಎಂದು ತಿಳಿಸಿದೆ.

ಕರಾವಳಿಯಲ್ಲಿ ಮಳೆಯ ಆರ್ಭಟ ಹೆಚ್ಚಾಗುವ ಸೂಚನೆಯಿದ್ದು, ಮೀನುಗಾರಿಕೆಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿ 7ರಿಂದ 11 ಸೆಂ.ಮೀ ಮಳೆಯಾಗುವ ನಿರೀಕ್ಷೆಯಿದೆ.