Friday, 22nd November 2024

ರಾಜ್ಯದಲ್ಲಿ ಮುಂದಿನ ಮೂರು ದಿನ ಮಳೆ ಸಾಧ್ಯತೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕರಾವಳಿ, ಒಳ ನಾಡು ಮತ್ತು ಮೈಸೂರು ಭಾಗದಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆಗಳಿವೆ. ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದೆ.
ಬೆಂಗಳೂರಿನಲ್ಲಿ ಶುಕ್ರವಾರ ರಾತ್ರಿ ಸುರಿದ ಮಳೆಯಿಂದಾಗಿ ವಾಹನ ಸವಾರರು ಹೈರಾಣಾದರು.
ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಮಳೆರಾಯ ಅಬ್ಬರಿಸಿದ್ದಾನೆ. ಇತ್ತ ಉತ್ತರ ಕರ್ನಾಟಕ ಭಾಗದಲ್ಲಿ ಒಣ ಹವೆ ಮುಂದುವರಿ ಯಲ್ಲಿದ್ದು, ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಗಳು ಸಹ ಕಡಿಮೆ. ಬಂಗಾಳಕೊಲ್ಲಿಯ ಮಧ್ಯಭಾಗದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಳಯುಂಟಾಗುತ್ತಿದೆ. ಇನ್ನುಳಿದಂತೆ ರಾಜ್ಯದಲ್ಲಿ ಚಳಿಗಾಲ ಆರಂಭವಾಗುತ್ತಿದ್ದು, ಬೆಳಗಿನ ಜಾವ ಮತ್ತು ಸಂಜೆ ಶೀತಗಾಳಿಯ ಅನುಭವವಾಗುತ್ತಿದೆ.

ರಾತ್ರಿಯೇ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದ್ದು, ಹಬ್ಬದ ಸಂಭ್ರಮ ದಲ್ಲಿ ಹೊರಗೆ ಬಂದಿದ್ದ ಜನ ಮಳೆಯಲ್ಲಿ ಸಿಲುಕಿ ದರು. ಒಂದು ಗಂಟೆಗೂ ಅಧಿಕ ಕಾಲ ಸುರಿದ ಮಳೆಗೆ ವಾಹನ ಸವಾರರು ಫ್ಲೈ ಓವರ್ ಕೆಳಗೆ ಆಶ್ರಯ ಪಡೆದಿದ್ದರು.

ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ನ.6ರ ತನಕ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದ್ದು, ಮೀನುಗಾರರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.