ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡಿನಲ್ಲಿ ಮಳೆ ಹೆಚ್ಚಾ ಗಿದೆ. ಹೀಗಾಗಿ, ಕರ್ನಾಟಕದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಬೆಂಗಳೂರಿ ನಲ್ಲಿ ಕೂಡ ಇನ್ನೆರಡು ದಿನ ಹಳದಿ ಅಲರ್ಟ್ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ನವೆಂಬರ್ 20ರವರೆಗೂ ಮಳೆ ಮುಂದು ವರೆಯುವ ನಿರೀಕ್ಷೆಯಿದೆ.
ಇಂದು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ಇಂದಿನಿಂದ ನ.20ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಯಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಸೇರಿದಂತೆ ಎಲ್ಲಾ ಕರಾವಳಿ ಜಿಲ್ಲೆಗಳಿಗೆ ಇಂದು ಹಳದಿ ಅಲರ್ಟ್ ನೀಡಲಾಗಿದೆ.
ನ.19ರಂದು ಕೇರಳ, ಒಡಿಶಾ ಮತ್ತು ಪುದುಚೇರಿ, ಮಾಹೆಯಲ್ಲಿ ಮಳೆಯಾಗುವ ಸಾಧ್ಯತೆಯಿದೆ. ನ.20ರಂದು ಕೂಡ ಈ ಪ್ರದೇಶ ಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ನವೆಂಬರ್ 19ರವರೆಗೆ ಮಹಾರಾಷ್ಟ್ರ, ಗೋವಾ ಮತ್ತು ಕೊಂಕಣದಲ್ಲಿ ಮಿಂಚು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ತಮಿಳುನಾಡಿನ ಚೆನ್ನೈ, ಕಾಂಚೀಪುರಂ, ತಿರುವಳ್ಳೂರ್ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ ಇಂದು ರೆಡ್ ಅಲರ್ಟ್ ಘೋಷಿಸ ಲಾಗಿದೆ.