Sunday, 15th December 2024

ಯಕ್ಷಗಾನ ಪ್ರದರ್ಶನಕ್ಕೆ ಕಾಲಮಿತಿ ನಿಗದಿ

ಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಿಂದ ನಡೆಸಲ್ಪಡುವ ಆರೂ ಮೇಳಗಳ ಯಕ್ಷಗಾನ ಪ್ರದರ್ಶನವನ್ನು ಕಾಲಮಿತಿಗೆ ಬದಲಾಯಿಸುವ ನಿರ್ಣಯವನ್ನು ಆಡಳಿತ ಮಂಡಳಿ ತೆಗೆದುಕೊಂಡಿದೆ.

ರಾತ್ರಿ 10.30ರಿಂದ 50 ಡೆಸಿಬಲ್‌ಗಿಂತ ಹೆಚ್ಚಿನ ಧ್ವನಿವರ್ಧಕ ಬಳಸ ಬಾರದು ಎಂದು ಸರಕಾರದಿಂದ ಸೂಚನೆ ಬಂದಿರುವ ಹಿನ್ನೆಲೆಯಲ್ಲಿ ಪ್ರದರ್ಶನದ ಸಮಯ ಬದಲಾಯಿಸು ವುದು ಅನಿವಾರ್ಯವಾಗಿದೆ.

ದೇವರ ಎದುರು ಕಾಲಮಿತಿ ಯಕ್ಷಗಾನ ಬಗ್ಗೆ ಹೂಪ್ರಶ್ನೆ ಇಟ್ಟಾಗ ಒಪ್ಪಿಗೆ ಬಂದಿದೆ. ಸಂಜೆ 5 ಗಂಟೆಯಿಂದ ರಾತ್ರಿ 10.30ರ ತನಕ ಯಕ್ಷಗಾನ ನಡೆಸುವ ಬಗ್ಗೆ ನಿರ್ಣಯಿಸಲಾಗಿದೆ.

ಪ್ರದರ್ಶನದ ಸ್ವರೂಪ ಚಿಂತನೆಗಳ ಬಗ್ಗೆ ಮುಂದೆ ನಿರ್ಧರಿಸಲಾಗುವುದು ಎಂದು ಕಟೀಲು ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷರಾದ ಆನುವಂಶಿಕ ಮೊಕ್ತೇಸರ ಕೊಡೆತ್ತೂರು ಗುತ್ತು ಸನತ್‌ ಕುಮಾರ ಶೆಟ್ಟಿ ಹಾಗೂ ಆನುವಂಶಿಕ ಮೊಕ್ತೇಸರ ಮತ್ತು ಅರ್ಚಕ ವಾಸುದೇವ ಆಸ್ರಣ್ಣ ತಿಳಿಸಿದ್ದಾರೆ.