ಬೆಂಗಳೂರು: ಬೆಂಗಳೂರಿನಲ್ಲಿ (Bengaluru news) ರೈಲಿಗೆ ಸಿಲುಕಿ (Train Accident) ಇಬ್ಬರು ಯುವಕರು ಸಾವನ್ನಪ್ಪಿರುವ (Death news) ಘಟನೆ ನಡೆದಿದೆ. ತಡರಾತ್ರಿ ಈ ದಾರುಣ ಘಟನೆ ಸಂಭವಿಸಿದೆ. ರೈಲ್ವೆ ಟ್ರ್ಯಾಕ್‌ನಲ್ಲಿ (Railway Track) ಇವರು ಕುಳಿತಿದ್ದರು ಎಂದು ತಿಳಿಯಲಾಗಿದೆ.
ಬೆಂಗಳೂರಿನ ಮಾಗಡಿ ರಸ್ತೆಯ ರೈಲ್ವೇ ಗೇಟ್ ಬಳಿ ರೈಲಿಗೆ ಸಿಲುಕಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಯುವಕರನ್ನು ಸೂರ್ಯ, ಶರತ್ ಎಂದು ಗುರುತಿಸಲಾಗಿದೆ. ರಾತ್ರಿ 10:30ರ ವೇಳೆಗೆ ಇವರು ಟ್ರ್ಯಾಕ್ ಮೇಲೆ ಕೂತಿದ್ದಾಗ ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ರೈಲಿಗೆ ಸಿಲುಕಿ ಸೂರ್ಯ ಹಾಗೂ ಶರತ್ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಬ್ಬರೂ ಹಳಿಯ ಮೇಲೆ ಕುಳಿತು ಪಾರ್ಟಿ ಮಾಡುತ್ತಿದ್ದಿರಬಹುದು ಅಥವಾ ಕಿವಿಗೆ ಇಯರ್ ಫೋನ್ ಹಾಕಿಕೊಂಡಿದ್ದರಿಂದ ರೈಲು ಆಗಮನದ ಸದ್ದು ಇಬ್ಬರಿಗೂ ಕೇಳಿಸಿಲ್ಲ ಎಂದು ಶಂಕಿಸಲಾಗಿದೆ.
ಸಿಲಿಂಡರ್ ಸ್ಪೋಟದಿಂದ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಹುಬ್ಬಳ್ಳಿಯ ಸಾಯಿ ನಗರದ ಈಶ್ವರ ದೇವಾಲಯದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿರುವ ಘಟನೆ ನಡೆದಿತ್ತು. ಈಶ್ವರ ದೇವಸ್ಥಾನದಲ್ಲಿ ರಾತ್ರಿ ಮಲಗಿದ್ದಾಗ ಸಿಲಿಂಡರ್ ಸ್ಪೋಟಗೊಂಡಿದೆ. ಘಟನೆಯಲ್ಲಿ 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. ಈ ಪೈಕಿ ನಿಜಲಿಂಗಪ್ಪ ಬೇಪುರಿ (58) ಹಾಗೂ ಸಂಜಯ್ ಸವದತ್ತಿ (18)ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಗ್ಯಾಸ್ ಸೋರಿಕೆಯಾಗಿ ದೀಪದ ಬೆಂಕಿ ತಗುಲಿ ಸಿಲಿಂಡರ್ ಸ್ಪೋಟಗೊಂಡಿತ್ತು. ಗಾಯಾಳು ಅಯ್ಯಪ್ಪ ಭಕ್ತರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: Congress Session: ಇಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ, ಗಾಂಧಿ ಪ್ರತಿಮೆ ಅನಾವರಣ