ತಿಪಟೂರು: ನಾಡಿನ ಶಕ್ತಿದೇವತೆಗಳಲ್ಲಿ ಒಂದಾದ ತಾಲೂಕಿನ ದಸರೀಘಟ್ಟದ ಆದಿಚುಂಚನಗಿರಿ ಶಾಖಾಮಠದ ಚೌಡೇಶ್ವರಿ ದೇವಿಯ ಮುಳ್ಳುಗದ್ದಿಗೆ ಉತ್ಸವ ಆಳೆತ್ತರದ ಗಟ್ಟಿಕಾರೆಮುಳ್ಳಿನ ರಾಶಿಯ ಮೇಲೆ ವಿಜಯದಶಮಿಯ ಶನಿವಾರ ಅತ್ಯಂತ ವೈಭವ ಮತ್ತು ಭಕ್ತಿ ಪರಾಕಾಷ್ಠೆಯಿಂದ (Tumkur News) ನಡೆಯಿತು.
ಮುಳ್ಳುಗದ್ದಿಗೆ ಉತ್ಸವಕ್ಕೆ ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಚಾಲನೆ ನೀಡಿದರು.
ಈ ಸುದ್ದಿಯನ್ನೂ ಓದಿ | Karnikotsava: ʼಆಕಾಶದತ್ತ ಚಿಗುರಿತಲೇ, ಬೇರೆಲ್ಲಾ ಮುತ್ತಾಯಿತಲೇ ಪರಾಕ್ʼ; ಗೊರವಯ್ಯನ ಕಾರ್ಣಿಕ ನುಡಿಯ ಅರ್ಥವೇನು?
ಮುಳ್ಳು ಗದ್ದಿಗೆ ವಿಶೇಷ
ಸುಮಾರು 7-8 ಅಡಿಯಷ್ಟು ಉದ್ದ-ಅಗಲದ ಜಾಗದಲ್ಲಿ ಆಳೆತ್ತರದಷ್ಟು ಗಟ್ಟಿ ಕಾರೆಮುಳ್ಳಿನ ಗಿಡಗಳನ್ನು ರಾಶಿ ಹಾಕಲಾಗುತ್ತದೆ. ಈ ಮುಳ್ಳಿನ ರಾಶಿಯ ಮೇಲೆ ಚೌಡೇಶ್ವರಿ ದೇವಿಯವರ ಉತ್ಸವ ಮೂರ್ತಿಯನ್ನು ಆರೇಳು ಭಕ್ತರು ಹೊತ್ತುಕೊಂಡು ಅತ್ಯಂತ ಭಕ್ತಿಶ್ರದ್ಧೆಯಿಂದ ಸರಾಗವಾಗಿ ಮುಳ್ಳಿನ ರಾಶಿಯನ್ನು ತುಳಿಯುತ್ತಾ ಒಂದು ಭಾಗದಿಂದ ಮತ್ತೊಂದು ಭಾಗಕ್ಕೆ ಮೂರು ಬಾರಿ ಹತ್ತಿ ನಡೆಯುತ್ತಾರೆ. ಇದರ ಜತೆಗೆ ಹರಕೆ ಮಾಡಿಕೊಂಡ ಭಕ್ತ ಸಮೂಹವೂ ದೇವಿಯ ಹಿಂದೆ ನಡೆದುಕೊಂಡು ಹೋಗುವ ಮೂಲಕ ತಮ್ಮ ಹರಕೆ ತೀರಿಸಿ ಧನ್ಯತಾ ಭಾವ ಮೆರೆಯುತ್ತಾರೆ. ಈ ಬಾರಿಯ ಮುಳ್ಳುಗದ್ದುಗೆಗೆ ಸಹಸ್ರಾರು ಮಂದಿ ಭಕ್ತಾದಿಗಳು ಭಾಗವಹಿಸಿದ್ದರು.