Tuesday, 19th November 2024

Tumkur News: ಅಧಿಕಾರಿಗಳ ಅಲಭ್ಯತೆ-ಪರಿಶಿಷ್ಟ ಕಲ್ಯಾಣ ಸಮಿತಿ ಸಭೆ ಮುಂದೂಡಿಕೆ

Tumkur News

ತುಮಕೂರು : ಕರ್ನಾಟಕ ವಿಧಾನ ಮಂಡಲದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲ್ಯಾಣ ಸಮಿತಿ ಸಭೆಯನ್ನು ಅಧಿಕಾರಿಗಳ ಅಲಭ್ಯತೆ ಕಾರಣ ಸಮಿತಿಯ ಅಧ್ಯಕ್ಷ ಪಿ.ಎಂ. ನರೇಂದ್ರ ಸ್ವಾಮಿ ಮುಂದೂಡಿದ್ದಾರೆ(Tumkur News). ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ಕೈಗೊಳ್ಳಲಾದ ಕಾರ್ಯಕ್ರಮಗಳ ಅನುಷ್ಠಾನ ಹಾಗೂ ಇನ್ನಿತರೆ ವಿಷಯಗಳ ಕುರಿತು ಪ್ರಗತಿ ಪರಿಶೀಲನೆ ನಡೆಸುವ ಸಲುವಾಗಿ ಶನಿವಾರ ಮಧ್ಯಾಹ್ನ ವಿಧಾನ ಮಂಡಲದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲ್ಯಾಣ ಸಮಿತಿ ಸಭೆ(Scheduled Caste and tribe Welfare Committee Meeting) ನಿಗದಿಯಾಗಿತ್ತು.

ಸಮಿತಿ ಸದಸ್ಯರು ಚಿತ್ರದುರ್ಗ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ಮುಗಿಸಿ ತುಮಕೂರು ತಲುಪುವ ವೇಳೆಗೆ ಸ್ವಲ್ಪ ವಿಳಂಬವಾದ ಕಾರಣ ಸಭೆಯನ್ನು ಮುಂದೂಡಲಾಯಿತು. ಜಿಲ್ಲೆಯಲ್ಲಿ ಉಪಲೋಕಾಯುಕ್ತರು ಸಾರ್ವಜನಿಕ ಕುಂದು ಕೊರತೆಗಳನ್ನು ಆಲಿಸುವ ಹಾಗೂ ಹಳೆಯ ಪ್ರಕರಣಗಳ ವಿಲೇವಾರಿ ಸಂಬಂಧಿಸಿದಂತೆ ನಿನ್ನೆಯಿಂದ ಕಾರ್ಯಕ್ರಮ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಕೆಲವು ಅಧಿಕಾರಿಗಳು ಲೋಕಾಯುಕ್ತರ ಸಭೆಯಲ್ಲಿ ಹಾಜರಿರುವುದಾಗಿ ಹಿರಿಯ ಅಧಿಕಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅಧಿಕಾರಿಗಳ ಸಮ್ಮುಖದಲ್ಲಿ ಮಾಹಿತಿ ಪಡೆದು ಸಮಸ್ಯೆಗಳ ಪರಿಹಾರಕ್ಕೆ ಮಾರ್ಗೋಪಾಯಗಳನ್ನು ಕಂಡು ಹಿಡಿಯುವುದು ಸಮಿತಿಯ ಉದ್ದೇಶವಾಗಿತ್ತು.

ಆದರೆ ಸಭೆಯಲ್ಲಿ ಅಧಿಕಾರಿಗಳ ಅಲಭ್ಯತೆ ಇರುವುದರಿಂದ ಸಭೆಯನ್ನು ಮುಂದೂಡುವುದಾಗಿ ಸಮಿತಿಯ ಅಧ್ಯಕ್ಷರೂ ಆದ ಶಾಸಕ ಪಿ.ಎಂ. ನರೇಂದ್ರ ಸ್ವಾಮಿ ತಿಳಿಸಿದ್ದಾರೆ. ಮುಂದೊಂದು ದಿನ ಜಿಲ್ಲೆಯ ಪ್ರಗತಿ ಪರಿಶೀಲನೆಯನ್ನು ಬೆಂಗಳೂರಿನಲ್ಲಿಯೇ ಕೈಗೊಳ್ಳುವುದಾಗಿಯೂ ಅವರು ತಿಳಿಸಿದರು. ಸಭೆಯಲ್ಲಿ ಸಮಿತಿ ಸದಸ್ಯರಾದ ಡಾ. ಎಂ.ಚಂದ್ರಪ್ಪ, ಕೆ.ಸಿ.ವೀರೇಂದ್ರ ಪಪ್ಪಿ, ಬಿ.ದೇವೇಂದ್ರಪ್ಪ, ಕೃಷ್ಣಾನಾಯ್ಕ, ಹೇಮಲತಾ ನಾಯಕ, ಆರ್.ರಾಜೇಂದ್ರ ರಾಜಣ್ಣ, ಐಹೊಳೆ ದುರ್ಯೋಧನ ಮಹಲಿಂಗಪ್ಪ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಮಹಾನಗರಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜ, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.

ಈ ಸುದ್ದಿಯನ್ನೂ ಓದಿ: Tumkur University: ತುಮಕೂರು ವಿವಿ ವಿಜ್ಞಾನ ವಿಭಾಗ ಬಿದರಕಟ್ಟೆಗೆ ಸ್ಥಳಾಂತರ: ಕುಲಪತಿ ವೆಂಕಟೇಶ್ವರಲು