ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆಯಲ್ಲಿ (Channapatna By Election) ನನ್ನ ಹಾಗೂ ನನ್ನ ತಂದೆ ದೇವೆಗೌಡರ ಬಗ್ಗೆ ಕಾಂಗ್ರೆಸ್ ನಾಯಕರು ಮಾಡುತ್ತಿರುವ ಅವಹೇಳನಕಾರಿ ಟೀಕೆಗಳಿಗೆ ನಾನು ಈಗ ಉತ್ತರ ಕೊಡುವುದಿಲ್ಲ. ಚುನಾವಣೆ ನಡೆದು ಫಲಿತಾಂಶ ಹೊರಬಂದ ಮೇಲೆ ಉತ್ತರಿಸುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹೇಳಿದರು. ಬೆಂಗಳೂರಿನಲ್ಲಿ ಪ್ರಧಾನಮಂತ್ರಿ ಉದ್ಯೋಗ ಮೇಳದಲ್ಲಿ ಪಾಲ್ಗೊಂಡ ನಂತರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.
ಈ ಸುದ್ದಿಯನ್ನೂ ಓದಿ | Pralhad Joshi: ವಕ್ಫ್ ಮೂಲಕ ಆಸ್ತಿ ಕಬಳಿಸಲು ಜಮೀರ್ ಅಹ್ಮದ್, ಕಾಂಗ್ರೆಸ್ ಕುಮ್ಮಕ್ಕು: ಜೋಶಿ ಆರೋಪ
ಫಲಿತಾಂಶ ಬಂದ ನಂತರ ಮಾತನಾಡುತ್ತೇನೆ
ಚುನಾವಣೆ ಬಂದ ಮೇಲೆ ನಮ್ಮ ಕುಟುಂಬದ ಮೇಲೆ ಕಾಂಗ್ರೆಸ್ ನಾಯಕರು ಅತ್ಯಂತ ತುಚ್ಛವಾಗಿ ಮಾತನಾಡುತ್ತಿದ್ದಾರೆ. ಈ ದೇಶಕ್ಕೆ ಪ್ರಧಾನಿ ಆಗಿದ್ದ ದೇವೇಗೌಡರು ವೀಲ್ ಚೇರ್‌ನಲ್ಲಿ, ಆಂಬ್ಯುಲೆನ್ಸ್‌ನಲ್ಲಿ ಬಂದು ಪ್ರಚಾರ ಮಾಡುತ್ತಾರೆ ಎಂದು ಹೀನಾಯವಾಗಿ ಟೀಕೆ ಮಾಡುತ್ತಿದ್ದಾರೆ. ಅವರ ಸಾವನ್ನು ಕಾಂಗ್ರೆಸ್ ನಾಯಕರು ಬಯಸುತ್ತಿದ್ದಾರೆ. ನಾನು ಈಗ ಏನನ್ನೂ ಮಾತನಾಡುವುದಿಲ್ಲ. ಎಲ್ಲಾ ಹೇಳಿಕೆಗಳನ್ನು ತೆಗೆದಿಟ್ಟುಕೊಳ್ಳುತ್ತೇನೆ. ಫಲಿತಾಂಶ ಬಂದ ನಂತರ ಮಾತನಾಡುತ್ತೇನೆ ಎಂದು ಅವರು ಕಿಡಿಕಾರಿದರು.
ನನ್ನ ಮೇಲೆಯೂ ಹಲವಾರು ಆಪಾದನೆಗಳನ್ನು ವೈಯಕ್ತಿಕವಾಗಿ ನೆಲೆಗಟ್ಟಿನಲ್ಲಿ ಮಾಡಿದ್ದಾರೆ. ಯಾವ ಟೀಕೆಗೂ ನಾನು ಉತ್ತರ ಕೊಡಲಾರೆ. ಎಲ್ಲವನ್ನೂ ಮೌನವಾಗಿ ಸಹಿಸಿಕೊಳ್ಳುತ್ತೇನೆ. 13ನೇ ತಾರೀಖು ಚುನಾವಣೆ ನಡೆಯುತ್ತದೆ, 23 ರಂದು ಫಲಿತಾಂಶ ಬರುತ್ತದೆ. ಆಮೇಲೆ ಈ ಎಲ್ಲಾ ಹೇಳಿಕೆಗಳಿಗೆ ಉತ್ತರ ಕೊಡುತ್ತೇನೆ ಎಂದು ಅವರು ಗುಡುಗಿದರು.
ಈ ಸುದ್ದಿಯನ್ನೂ ಓದಿ | Bengaluru News: ಬೆಂಗಳೂರಿನಲ್ಲಿ ‘ಕ್ರೊಮ್ಯಾಟಿಕ್ ರಿದಮ್ಸ್’ ವರ್ಣಚಿತ್ರಗಳ ಪ್ರದರ್ಶನ
ಎಲ್ಲವನ್ನೂ ನೋಟ್ ಮಾಡಿಕೊಂಡಿದ್ದೇನೆ
ದೇವೇಗೌಡ ಆರೋಗ್ಯದಿಂದ ಹಿಡಿದು ನಮ್ಮ ಪಕ್ಷದ ಹಲವಾರು ನಿರ್ಧಾರಗಳ ಬಗ್ಗೆ, ನನ್ನ ಬಗ್ಗೆ, ನಮ್ಮ ಕುಟುಂಬದ ಬಗ್ಗೆ ಕಾಂಗ್ರೆಸ್ ನಾಯಕರು ಹೇಯವಾಗಿ ಮಾತನಾಡುತ್ತಿದ್ದಾರೆ. ಇವರಿಗೆ ಜನರೇ ತಕ್ಕಪಾಠ ಕಲಿಸಲಿದ್ದಾರೆ. ಅವರು ಒಬ್ಬರೇ ಒಕ್ಕಲಿಗರಾ? ನಾವೂ ಒಕ್ಕಲಿಗರೇ ಎಂದು ಚರ್ಚೆ ಮಾಡುತ್ತಿದ್ದಾರೆ. ಎಲ್ಲವನ್ನೂ ನೋಟ್ ಮಾಡಿಕೊಂಡಿದ್ದೇನೆ. ಫಲಿತಾಂಶದ ನಂತರ ಎಲ್ಲದಕ್ಕೂ ಉತ್ತರ ಕೋಡ್ತೀನಿ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದರು.