Thursday, 21st November 2024

HD Kumaraswamy: ಎಚ್‌ಎಂ‌ಟಿ ಭೂಮಿ ವಶಕ್ಕೆ ಪಡೆದ ರಾಜ್ಯ ಸರ್ಕಾರದ ವಿರುದ್ಧ ಕಾನೂನು ಹೋರಾಟ; ಕುಮಾರಸ್ವಾಮಿ ಘೋಷಣೆ

HD Kumaraswamy

ಬೆಂಗಳೂರು: ನಗರದ ಜಾಲಹಳ್ಳಿಯಲ್ಲಿ ಎಚ್‌ಎಂ‌ಟಿ ಕಂಪನಿಗೆ ಸೇರಿದ ಐದು ಎಕರೆ ಭೂಮಿ ವಶಕ್ಕೆ ತೆಗೆದುಕೊಂಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ (State Congress Government) ವಿರುದ್ಧ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಕಿಡಿಕಾರಿದ್ದಾರೆ. ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಎಚ್‌ಎಂ‌ಟಿ ಜಮೀನು ವಶ ವಿರುದ್ಧ ಕಾನೂನು ಹೋರಾಟ ಮಾಡಲಾಗುವುದು. ರಾಜ್ಯ ಸರ್ಕಾರಕ್ಕೆ ಹಿನ್ನೆಡೆ ಆಗುವುದು ಖಚಿತ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Bengaluru Power Cut: ಗಮನಿಸಿ, ಅ. 28 ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ಇರುವುದಿಲ್ಲ

ಶ್ರೀನಿವಾಸಪುರದಲ್ಲಿ ಮಾಜಿ ಸ್ಪೀಕರ್ ಒಬ್ಬರು ನೂರಾರು ಎಕರೆ ಅರಣ್ಯ ಭೂಮಿ ಲೂಟಿ ಹೊಡೆದಿದ್ದಾರಲ್ಲ, ಮೊದಲು ಅದರ ಬಗ್ಗೆ ನೋಡಲಿ ಸಚಿವ ಈಶ್ವರ್ ಖಂಡ್ರೆ ಅವರು. ಇದರ ಬಗ್ಗೆ ನ್ಯಾಯಾಲಯ ಕೊಟ್ಟಿರುವ ತೀರ್ಪು ಅನ್ನೇ ಕುರ್ಚಿ ಕೆಳಗೆ ಹಾಕಿಕೊಂಡು ಕೂತಿದ್ದಾರೆ. ಮೊದಲು ಇದನ್ನು ನೋಡಲಿ. ಎಷ್ಟು ಎಕರೆ ಲೂಟಿ ಆಗಿದೆ ಅಲ್ಲಿ ನೋಡಲಿ. ನಿನ್ನೆ ಐದು ಎಕರೆಗೆ ಬಲವಂತವಾಗಿ ಹೋಗಿ ಫೆನ್ಸಿಂಗ್ ಹಾಕಿಕೊಂಡಿದ್ದಾರೆ. ಕೋರ್ಟ್ ಆದೇಶಗಳಿಗೆ ಎಚ್‌ಎಂಟಿ ಹಾಗೂ ಅಧಿಕಾರಿಗಳು ತಲೆ ಬಾಗಬೇಕಾಗುತ್ತದೆ ಎಂದು ಅವರು ಹೇಳಿದರು.