Friday, 25th October 2024

Pralhad Joshi: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಕಾಂಗ್ರೆಸ್ ಸರ್ಕಾರದ ಭ್ರಷ್ಟತೆಗೆ ಸಾಕ್ಷಿ; ಜೋಶಿ ವಾಗ್ದಾಳಿ

Pralhad Joshi

ಹುಬ್ಬಳ್ಳಿ: 200 ಕೋಟಿ ರೂ. ಮೌಲ್ಯದ ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ (Congress Government) ಕೈಗನ್ನಡಿ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ವಾಗ್ದಾಳಿ ಮಾಡಿದ್ದಾರೆ. ಭ್ರಷ್ಟಾಚಾರ ಎನ್ನುವುದು ಕಾಂಗ್ರೆಸ್ ಪಕ್ಷದ ರಕ್ತದಲ್ಲೇ ಇದೆ. ಬೇಲೇಕೇರಿ ಕಬ್ಬಿಣದ ಅದಿರು ನಾಪತ್ತೆ ಪ್ರಕರಣದಿಂದ ಮತ್ತೆ ಇದು ಸಾಬೀತಾಗಿದೆ ಎಂದು ಅವರು ಆಪಾದಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Shiggaon By Election: ಕಾಂಗ್ರೆಸ್‌ ದುರಾಡಳಿತದಿಂದ ರಾಜ್ಯವನ್ನು ರಕ್ಷಿಸಲು ನನ್ನ ಮಗನನ್ನು ಗೆಲ್ಲಿಸಿ; ಬೊಮ್ಮಾಯಿ ಮನವಿ

200 ಕೋಟಿ ರೂಪಾಯಿ ಮೌಲ್ಯದ 39,700 ಮೆಟ್ರಿಕ್‌ ಟನ್‌ ಅದಿರು ಅಕ್ರಮವಾಗಿ ಚೀನಾಕ್ಕೆ ರಫ್ತು ಮಾಡಿದ್ದ ಪ್ರಕರಣವನ್ನು ಸಿಬಿಐ ಭೇದಿಸಿದೆ. ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮತ್ತು ಇಬ್ಬರು ಸಹಚರರನ್ನು ಬಂಧಿಸಲು ಆದೇಶಿಸಿದ ಜನಪ್ರತಿನಿಧಿ ನ್ಯಾಯಾಲಯ ನ್ಯಾಯವನ್ನು ಎತ್ತಿ ಹಿಡಿದಿದೆ ಎಂದು ಹೇಳಿದ್ದಾರೆ.

ಕೈ ಕಮಾಂಡ್ ನಾಯಕರೇ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಹೀಗಿರುವಾಗ ಆ ಪಕ್ಷದ ಉಳಿದ ನಾಯಕರಲ್ಲಿ ಪ್ರಾಮಾಣಿಕತೆಯನ್ನು ಅಪೇಕ್ಷಿಸಲು ಸಾಧ್ಯವೇ? ಎಂದು ಪ್ರಲ್ಹಾದ್‌ ಜೋಶಿ ಪ್ರಶ್ನಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Job Guide: ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ನ್ಯೂಸ್‌; ನ್ಯಾಷನಲ್‌ ಇನ್ಶೂರೆನ್ಸ್‌ ಕಂಪೆನಿಯ 500 ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಜೀನಾಮೆ ನೀಡಲಿ ಸಿಎಂ

ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡುವ ಜತೆಗೆ ಭ್ರಷ್ಟ ಸರ್ಕಾರದಿಂದ ಜನರನ್ನು ಮುಕ್ತಿಗೊಳಿಸಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.