Monday, 28th October 2024

Pralhad Joshi: ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಣದ ಹೊಳೆ ಹರಿಸುತ್ತಿದೆ; ಜೋಶಿ ಆರೋಪ

Pralhad Joshi

ಹುಬ್ಬಳ್ಳಿ: ವಿಧಾನಸಭೆ ಉಪ ಚುನಾವಣೆಯಲ್ಲಿ ಆಡಳಿತ ಪಕ್ಷ ಹಣದ ಹೊಳೆಯನ್ನೇ ಹರಿಸುತ್ತಿದೆ. ಆದಾಗ್ಯೂ ಎನ್‌ಡಿಎ (NDA) ಮೂರೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi) ವಿಶ್ವಾಸ ವ್ಯಕ್ತಪಡಿಸಿದರು. ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್‌ನವರು ಈ ಮೂರೂ ಕ್ಷೇತ್ರಗಳಲ್ಲಿ ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಸಚಿವರುಗಳನ್ನು ಇರಿಸಿದೆ. ಹಣದ ಹೊಳೆ ಹರಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Pralhad Joshi: ಲೋಕಾಯುಕ್ತವು ಕಾಂಗ್ರೆಸ್ ಸರ್ಕಾರದ ಕೈಗೊಂಬೆ; ಜೋಶಿ ಆರೋಪ

ಕಾಂಗ್ರೆಸ್‌ನವರು ಬಹಳ ಭ್ರಮನಿರಸರಾಗಿ ತನ್ನ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಸರ್ಕಾರ ಆಡಳಿತ ಯಂತ್ರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ. ಸರ್ಕಾರಿ ಮಶಿನರಿ ಉಪಯೋಗಿಸಿಕೊಂಡು ದುಡ್ಡು ಹಂಚುತ್ತಿದ್ದಾರೆ. ಆದರೆ, ಇದನ್ನೆಲ್ಲ ಮೀರಿ ಎನ್‌ಡಿಎ (NDA) ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಪ್ರಲ್ಹಾದ್‌ ಜೋಶಿ ಹೇಳಿದರು.

ಈ ಸುದ್ದಿಯನ್ನೂ ಓದಿ | R Ashok: ಕಾಂಗ್ರೆಸ್‌ ಸರ್ಕಾರದ ಕುಮ್ಮಕ್ಕಿನಿಂದ ರಾಜ್ಯದಲ್ಲೀಗ ಲ್ಯಾಂಡ್‌ ಜಿಹಾದ್‌; ಆರ್. ಅಶೋಕ್‌ ಆರೋಪ

ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಎಲ್ಲೆಡೆಯೂ ಕಾಂಗ್ರೆಸ್ ಮಂತ್ರಿ ಮಂಡಲವೇ ಬೀಡು ಬಿಟ್ಟಿದೆ. ಇದರಿಂದಲೇ ಗೊತ್ತಾಗುತ್ತದೆ ಸೋಲುವ ಭಯದಲ್ಲಿ ಏನೇನು ತಂತ್ರ ಹೆಣೆದಿದ್ದಾರೆ. ಅದೆಷ್ಟು ಹಣ ಚೆಲ್ಲುತ್ತಿದ್ದಾರೆಂದು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದರು.