ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ನೇತೃತ್ವದ ಕೇಂದ್ರ ಸರ್ಕಾರ (Central Government) ಸಕಾಲಿಕವಾಗಿ ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ ಘೋಷಿಸಿ ರೈತರಿಗೆ ಬಲ ತುಂಬಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಲ್ಹಾದ್ (Pralhad Joshi) ತಿಳಿಸಿದ್ದಾರೆ. ನವದೆಹಲಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಮುಂಗಾರು, ಹಿಂಗಾರು ಹಂಗಾಮಿನ ವಿವಿಧ ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಿಸುವ ಮೂಲಕ ಪ್ರಧಾನಿ ಮೋದಿ ಅವರು ಅನ್ನದಾತರಿಗೆ ಬೆಳಕು ತೋರಿದ್ದಾರೆ ಎಂದು ಬಣ್ಣಿಸಿದ್ದಾರೆ.
2025-26ಕ್ಕೆ ಹಿಂಗಾರು ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ (ಎಂ.ಎಸ್.ಪಿ) ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | R Ashok: ಕಾವೇರಿ 5ನೇ ಹಂತದ ಯೋಜನೆ ಮಾಡಿದ್ದು ಬಿಜೆಪಿ; ಆರ್. ಅಶೋಕ್ ಪ್ರತಿಪಾದನೆ
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಆರ್ಥಿಕ ವ್ಯವಹಾರಗಳಿಗೆ ಸಂಬಂಧಿಸಿದ ಮಂತ್ರಿಮಂಡಲ ಸಮಿತಿ (ಸಿಸಿಇಎ) ವ್ಯಾಪಾರ ವರ್ಷ 2025-26ಕ್ಕಾಗಿ ಸೂಚಿಸಿದ ಎಲ್ಲಾ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ (ಎಂ.ಎಸ್.ಪಿ) ಹೆಚ್ಚಿಸಲು ಅನುಮೋದನೆ ನೀಡಿದೆ ಎಂದು ಜೋಶಿ ಹೇಳಿದ್ದಾರೆ.
ಎಂ.ಎಸ್.ಪಿಯಲ್ಲಿ ಗರಿಷ್ಠ ಹೆಚ್ಚಳವಾಗಿ ಸಾಸಿವೆಗೆ ಪ್ರತಿ ಕ್ವಿಂಟಲ್‌ಗೆ 300 ರೂ. ಹಾಗೂ ಮಸೂರ ಬೇಳೆಗೆ ಪ್ರತಿ ಕ್ವಿಂಟಲ್‌ಗೆ 275 ರೂ.ಗೆ ಏರಿದೆ. ಕಡಲೆ, ಗೋಧಿ, ಕುಸುಬೆ ಮತ್ತು ಬಾರ್ಲಿ ಧಾನ್ಯಗಳಿಗೆ ಪ್ರತಿ ಕ್ವಿಂಟಲ್‌ಗೆ ಅನುಕ್ರಮವಾಗಿ 210 ರೂ., 150 ರೂ., 140 ರೂ. ಮತ್ತು 130 ರೂಪಾಯಿ ಹೆಚ್ಚಿಸಲಾಗಿದೆ ಎಂದು ಸಚಿವರು ವಿವರಿಸಿದ್ದಾರೆ.
2025-26 ರ ಹಿಂಗಾರು ಬೆಳೆಗಳಿಗಾಗಿ ಎಂ.ಎಸ್.ಪಿಯಲ್ಲಿ ಮಾಡಲಾದ ಹೆಚ್ಚಳ 2018-19 ರ ಕೇಂದ್ರ ಬಜೆಟ್‌ನಲ್ಲಿ ಎಂ.ಎಸ್.ಪಿಯನ್ನು ಅಖಿಲ ಭಾರತೀಯ ನಿವ್ವಳ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಟ 1.5 ಪಟ್ಟು ಹೆಚ್ಚು ನಿಗದಿಪಡಿಸಿದೆ ಎಂದು ಜೋಶಿ ಹೇಳಿದ್ದಾರೆ.
ಈ ಸುದ್ದಿಯನ್ನೂ ಓದಿ | World Anesthesia Day: ಇಂದು ವಿಶ್ವ ಅನಸ್ತೇಶಿಯ ದಿನ; ಅರಿವಳಿಕೆಯ ಬಗೆಗೆ ನಮಗೆಷ್ಟು ಅರಿವಿದೆ?
ಗೋಧಿಗೆ ಶೇ.105, ಸಾಸಿವೆಗೆ ಶೇ.98; ಮಸೂರ ಬೇಳೆಗೆ ಶೇ.89, ಕಡಲೆಗೆ ಶೇ.60; ಬಾರ್ಲಿಗೆ ಶೇ.60, ಕುಸುಬೆಗೆ ಶೇ.50 ರಷ್ಟಿದೆ. ಹಿಂಗಾರು ಬೆಳೆಗಳ ಎಂ.ಎಸ್.ಪಿಯಲ್ಲಿ ಮಾಡಲಾದ ಈ ಹೆಚ್ಚಳದಿಂದ ನಿಶ್ಚಿತವಾಗಿ ರೈತರಿಗೆ ಲಾಭ ಸಿಗಲಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.