Thursday, 12th December 2024

Pralhad Joshi: ಮಹದಾಯಿ ಯೋಜನೆ; ರಾಜ್ಯ ಸರ್ಕಾರದ ನಿಯೋಗ ಪ್ರಧಾನಿ ಬಳಿಗೆ ಬಂದರೆ ಸ್ವಾಗತ: ಪ್ರಲ್ಹಾದ್‌ ಜೋಶಿ

Pralhad Joshi

ಹುಬ್ಬಳ್ಳಿ: ಮಹದಾಯಿ ಯೋಜನೆ ವಿಚಾರದಲ್ಲಿ ರಾಜ್ಯ ಸರ್ಕಾರದವರು ಪ್ರಧಾನಿ ಬಳಿ ನಿಯೋಗ ಬರುವುದಾದರೆ ಮುಕ್ತ ಸ್ವಾಗತ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ತಿಳಿಸಿದರು.

ಹುಬ್ಬಳ್ಳಿಯಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ನಿಯೋಗ ಬರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಒಂದು ವೇಳೆ ಬಂದರೆ ಸ್ವಾಗತಿಸುತ್ತೇವೆ ಎಂದು ಪ್ರತಿಕ್ರಿಯಿಸಿದರು.

ಈ ಸುದ್ದಿಯನ್ನೂ ಓದಿ | Pralhad Joshi: ಅಗ್ಗದ ದರದಲ್ಲಿ ವಿದ್ಯುತ್ ಉತ್ಪಾದಿಸುತ್ತಿದೆ ಭಾರತ; ಸೌರ ವಿದ್ಯುತ್ ಸ್ಥಾವರಗಳಿಗೆ ಶೇ.76ರಷ್ಟು ಸುಂಕ ಇಳಿಕೆ

ಮಹದಾಯಿ ವಿಚಾರದಲ್ಲಿ ಸರ್ವ ರೀತಿಯಲ್ಲೂ ರಾಜ್ಯಕ್ಕೆ ಸಹಾಯ ಮಾಡಲು ಕೇಂದ್ರ ಸಿದ್ಧವಿದೆ. ಸಚಿವ ಭೂಪೇಂದ್ರ ಯಾದವ್ ಅವರೊಂದಿಗೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.

ಕಾಂಗ್ರೆಸ್ ಏನು ಮಾಡಿಲ್ಲ

ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ಏನು ಪ್ರಯತ್ನ ಮಾಡಿಲ್ಲ. ರಾಜ್ಯದಲ್ಲಿ, ಗೋವಾದಲ್ಲಿ ಕಾಂಗ್ರೆಸ್ ಸರ್ಕಾರವೇ ಇದ್ದಾಗಲೂ ಕಾಂಗ್ರೆಸ್‌ನವರು ಏನೂ ಮಾಡಿಲ್ಲ ಎಂದು ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದರು.

ಬಿಜೆಪಿ ಸರ್ಕಾರದ ಅವಧಿಯಲ್ಲೇ ಎಲ್ಲ ಆಗಿದ್ದು

ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಹದಾಯಿಗೆ ಪ್ರಯತ್ನ ನಡೆದದ್ದು, ನ್ಯಾಯಾಧಿಕರಣ, ಕಚೇರಿ, ಸಿಬ್ಬಂದಿ ನೇಮಕ, ಗೆಜೆಟ್ ನೊಟಿಫಿಕೇಶನ್, ಡಿಪಿಆರ್‌ (DPR) ಅನುಮೋದನೆ ಹೀಗೆ ಪ್ರತಿಯೊಂದೂ ಬಿಜೆಪಿ ಅವಧಿಯಲ್ಲೇ ಆಗಿದೆ ಎಂದು ಹೇಳಿದರು.

ಈ ಸುದ್ದಿಯನ್ನೂ ಓದಿ | Ganesh Chaturthi 2024: ಫೆಸ್ಟಿವ್‌ ಸೀಸನ್‌‌‌ನಲ್ಲಿ ಮಕ್ಕಳಿಗಾಗಿ ಬಂತು ಆಕರ್ಷಕ ಎಥ್ನಿಕ್‌ ವೇರ್ಸ್

ಮಹದಾಯಿ ಅರಣ್ಯ ಭೂಮಿ ವ್ಯಾಪ್ತಿಯಲ್ಲಿ ಬರುವುದರಿಂದ ಈಗ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಅನುಮತಿ ಬೇಕಿದ್ದು, ಇದಕ್ಕಾಗಿ ಪ್ರಯತ್ನ ನಡೆದಿದೆ ಎಂದು ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದರು.