Sunday, 24th November 2024

Mandya Violence: ರಾಜಕೀಯ ಒತ್ತಡಕ್ಕೆ ಒಳಗಾಗದಂತೆ ಮಂಡ್ಯ ಎಸ್ಪಿಗೆ ಸಚಿವ ಪ್ರಲ್ಹಾದ್‌ ಜೋಶಿ ಎಚ್ಚರಿಕೆ

Mandya Violence

ಹುಬ್ಬಳ್ಳಿ: ನಾಗಮಂಗಲ ಗಲಭೆ ಪ್ರಕರಣದಲ್ಲಿ (Mandya Violence) ರಾಜಕೀಯ ಒತ್ತಡಕ್ಕೆ ಒಳಗಾಗಿ ಏನೇನೋ ಹುಚ್ಚಾಟ ಮಾಡಬೇಡಿ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಮಂಡ್ಯ ಎಸ್ಪಿಗೆ (Mandya SP) ಎಚ್ಚರಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ನಾಗಮಂಗಲ ಗಲಭೆ ಪೂರ್ವ ನಿಯೋಜಿತ ಇದ್ದಂತಿದೆ. ನಿಜವಾದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ ಎಂದು ಸೂಚಿಸಿದರು.

ನಾಗಮಂಗಲದಲ್ಲಿ ಗಣಪತಿ ಪ್ರತಿಷ್ಠಾಪನೆ, ಮೆರವಣಿಗೆ ಎಲ್ಲದೂ ಸರ್ಕಾರದ ನಿಯಮ ಮತ್ತು ಪೊಲೀಸ್ ಇಲಾಖೆ ಅನುಮತಿ ಮೇರೆಗೆ ನಡೆದಿದೆ. ಗಲಭೆ ಖಂಡಿಸಿ ಬಿಜೆಪಿ ತೀವ್ರ ಹೋರಾಟ ನಡೆಸಲಿದೆ ಎಂದು ಜೋಶಿ ತಿಳಿಸಿದರು.

ಈ ಸುದ್ದಿಯನ್ನೂ ಓದಿ | Mandya Violence: ಮಸೀದಿ ಮುಂದೆ ಗಣೇಶ ಮೆರವಣಿಗೆ ಹೋಗಬಾರದೇ, ಕರ್ನಾಟಕವೇನು ಇಸ್ಲಾಮಿಕ್ ರಿಪಬ್ಲಿಕ್ಕಾ? ಆರ್.ಅಶೋಕ್‌ ಪ್ರಶ್ನೆ

ಮಸೀದಿ ಇರುವುದೇ ರಸ್ತೆಯಲ್ಲಿ. ಇನ್ನು, ಇಲ್ಲಿ ಓಡಾಡಬೇಡಿ, ವಾದ್ಯ ಬಾರಿಸಬೇಡಿ ಎಂದರೆ ಹೇಗೆ? ಇದನ್ನೇನು ಪಾಕಿಸ್ತಾನ ಮಾಡಿದ್ದಾರೆಯೇ? ಎಂದು ಪ್ರಲ್ಹಾದ್‌ ಜೋಶಿ ಹರಿಹಾಯ್ದರು.

ಈ ಸುದ್ದಿಯನ್ನೂ ಓದಿ | Pralhad Joshi: ಮಮತಾ ಬ್ಯಾನರ್ಜಿ ಡ್ರಾಮಾ ಬಿಟ್ಟು ರಾಜೀನಾಮೆ ನೀಡಲಿ : ಪ್ರಲ್ಹಾದ್‌ ಜೋಶಿ

ಗಲಭೆಯಲ್ಲಿ ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ಎಸೆದವರನ್ನು ಬಿಟ್ಟು ಗಣಪತಿ ಇಟ್ಟವರನ್ನು, ಸಿಕ್ಕ ಸಿಕ್ಕವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾಗಿ ಕ್ರಮ ಜರುಗಿಸುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಖಂಡಿಸಿದರು.