Friday, 22nd November 2024

Pralhad Joshi: ಲೋಕಾಯುಕ್ತವು ಕಾಂಗ್ರೆಸ್ ಸರ್ಕಾರದ ಕೈಗೊಂಬೆ; ಜೋಶಿ ಆರೋಪ

Pralhad Joshi

ಹುಬ್ಬಳ್ಳಿ: ರಾಜ್ಯದಲ್ಲಿ ಲೋಕಾಯುಕ್ತ (Lokayukta) ತನಿಖಾ ಸಂಸ್ಥೆ ಸಿಎಂ ಮತ್ತು ಕಾಂಗ್ರೆಸ್ ಸರ್ಕಾರಕ್ಕೆ ಸಂಪೂರ್ಣ ಶರಣಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ಹಿಂದಿನಂತೆ ಖಡಕ್ ತನಿಖಾ ಸಂಸ್ಥೆಯಾಗಿ ಉಳಿದಿಲ್ಲ. ಬದಲಿಗೆ ಕಾಂಗ್ರೆಸ್ (Congress) ಆಯುಕ್ತವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಮತ್ತು ಅವರ ಕುಟುಂಬಕ್ಕೆ ಅನುಕೂಲಕರ ರೀತಿಯಲ್ಲಿ ತನಿಖೆ ನಡೆಯುತ್ತಿದೆ ಎಂದು ಸಚಿವ ಜೋಶಿ ಆರೋಪಿಸಿದರು.

ಈ ಸುದ್ದಿಯನ್ನೂ ಓದಿ | R Ashok: ಕಾಂಗ್ರೆಸ್‌ ಸರ್ಕಾರದ ಕುಮ್ಮಕ್ಕಿನಿಂದ ರಾಜ್ಯದಲ್ಲೀಗ ಲ್ಯಾಂಡ್‌ ಜಿಹಾದ್‌; ಆರ್. ಅಶೋಕ್‌ ಆರೋಪ

30 ಲಕ್ಷ ರೂಪಾಯಿ ಎಣಿಸುವ ವಿಡಿಯೋ ಸಮೇತ ಸುದ್ದಿ ಮಾಧ್ಯಮವೊಂದರಲ್ಲಿ ಬಿತ್ತರವಾಗಿದೆ. ಇಷ್ಟೊಂದು ದೊಡ್ಡ ಪ್ರಕರಣ ನಡೆದರೂ ಇದುವರೆಗೆ ಯಾರೊಬ್ಬರನ್ನೂ ಬಂಧಿಸಲಾಗಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಹೈಕಮಾಂಡ್ ಸಿಎಂ ಕೈ ಹಿಡಿದಿದೆ: ವಾಲ್ಮೀಕಿ, ಮುಡಾ ಹೀಗೆ ಸಾಕಷ್ಟು ಹಗರಣ ನಡೆದರೂ ಕಾಂಗ್ರೆಸ್ ಹೈಕಮಾಂಡ್ ಸಿಎಂ ಸಿದ್ದರಾಮಯ್ಯ ಅವರ ಕೈ ಹಿಡಿದಿದೆ ಎಂದು ಜೋಶಿ ಟೀಕಿಸಿದರು.

ಈ ಸುದ್ದಿಯನ್ನೂ ಓದಿ | Channapatna By Election: ಅಭಿವೃದ್ಧಿ ವಿಚಾರ ಇಟ್ಟುಕೊಂಡು ಪ್ರಚಾರ ಮಾಡುತ್ತಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

ಸಿಎಂ ಕೆಳಗಿಳಿಸಲು ನಿರ್ಧಾರ

ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ತೀರ್ಮಾನ ಮಾಡಿದಂತಿದೆ. ಆದರೆ, ಮುಂದಿನ ಸಿಎಂ ಡಿಕೆ ಶಿವಕುಮಾರ್ ಆಗುತ್ತಾರೋ ಅಥವಾ ಮತ್ಯಾರಾಗುತ್ತಾರೆ ಎಂಬುದನ್ನು ಈ ಉಪ ಚುನಾವಣೆ ನಿರ್ಧರಿಸಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದರು.