Thursday, 21st November 2024

Pralhad Joshi: ಸತೀಶ್ ಸೈಲ್ ಶಾಸಕತ್ವ ಅನರ್ಹಗೊಳಿಸಬೇಕು: ಜೋಶಿ ಆಗ್ರಹ

Pralhad Joshi

ಹುಬ್ಬಳ್ಳಿ: ಬೇಲೇಕೆರೆ ಅದಿರು ನಾಪತ್ತೆ ಪ್ರಕರಣದಲ್ಲಿ ದೀರ್ಘ ಕಾಲ ಜೈಲು ಶಿಕ್ಷೆಗೆ ಗುರಿಯಾಗಿರುವ ಸತೀಶ್ ಸೈಲ್ (Satish Sail) ಶಾಸಕತ್ವ ಅನರ್ಹಗೊಳಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಆಗ್ರಹಿಸಿದರು. ಬೆಂಗಳೂರಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಬೇಲೇಕೆರೆ ಅದಿರು ಅಕ್ರಮ ಸಾಗಾಟ ಪ್ರಕರಣದಲ್ಲಿ ನ್ಯಾಯಾಲಯ ಶಾಸಕ ಸತೀಶ್ ಸೈಲ್ ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ವಿಧಾನಸಭೆ ಸಭಾಪತಿ ಅವರನ್ನು ಒತ್ತಾಯಿಸಿದರು.

ಈ ಸುದ್ದಿಯನ್ನೂ ಓದಿ | BY Vijayendra: 3 ಕ್ಷೇತ್ರಗಳ ಉಪ ಚುನಾವಣೆಗೆ ರಾಜ್ಯ ರಾಜಕಾರಣದ ದಿಕ್ಕು ಬದಲಿಸುವ ಶಕ್ತಿಯಿದೆ ಎಂದ ವಿಜಯೇಂದ್ರ

ಕಾಂಗ್ರೆಸ್ ನಾಯಕರು ಕಳ್ಳ ಕಾಕರ ಪರ ನಿಂತಿದ್ದಾರೆ. ಅಂತೆಯೇ ಶಾಸಕ ಸತೀಶ್ ಸೈಲ್ ಅವರನ್ನು ಸಮರ್ಥಿಸಿಕೊಂಡಿದ್ದರು. ಕಳ್ಳರು, ವಂಚಕರನ್ನು ಕಾಂಗ್ರೆಸ್‌ನವರು ಹೇಗೆ ಸಮರ್ಥಿಸಿಕೊಳ್ಳುತ್ತಾರೆ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ ಎಂದು ಹೇಳಿದರು. ಕಾಂಗ್ರೆಸ್ ಪಕ್ಷ ಭ್ರಷ್ಟರ ಪಕ್ಷ ಎಂಬುದಕ್ಕೆ ಈ ಪ್ರಕರಣ ಮತ್ತೊಂದು ಉದಾಹರಣೆ ಎಂದು ವಾಗ್ದಾಳಿ ನಡೆಸಿದರು.

ವಕ್ಫ್ ಕಾನೂನು ತಿದ್ದುಪಡಿಗೆ ನಿರ್ಧಾರ

ವಕ್ಫ್ ಬೋರ್ಡ್‌ಗೆ ಹಕ್ಕುಗಳನ್ನು ನೀಡುವ ಕಾನೂನು ನಿಷ್ಪಕ್ಷಪಾತವಾಗಿಲ್ಲ. ಹಾಗಾಗಿ ಇದರ ತಿದ್ದುಪಡಿಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನಿರ್ಧರಿಸಿದೆ ಎಂದು ಪ್ರಲ್ಹಾದ್‌ ಜೋಶಿ ತಿಳಿಸಿದರು.

ಈ ಸುದ್ದಿಯನ್ನೂ ಓದಿ | HD Kumaraswamy: ಎಚ್‌ಎಂ‌ಟಿ ಭೂಮಿ ವಶಕ್ಕೆ ಪಡೆದ ರಾಜ್ಯ ಸರ್ಕಾರದ ವಿರುದ್ಧ ಕಾನೂನು ಹೋರಾಟ; ಕುಮಾರಸ್ವಾಮಿ ಘೋಷಣೆ

ವಕ್ಫ್ ಮಂಡಳಿಯ ಅಕ್ರಮ ಭೂಸ್ವಾಧೀನಕ್ಕೆ ಅನೇಕ ಬಡ ಮುಸ್ಲಿಮರು ಕೂಡ ಬಲಿಯಾಗಿದ್ದಾರೆ ಎಂದು ತಿಳಿಸಿದ ಜೋಶಿ ಅವರು, ಇಂತಹ ಹಲವಾರು ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡಲೆಂದು ನಮ್ಮ ಸರ್ಕಾರ ತಿದ್ದುಪಡಿ ಮಾಡಲು ನಿರ್ಧರಿಸಿದೆ ಎಂದು ಸ್ಪಷ್ಟಪಡಿಸಿದರು.