Saturday, 27th July 2024

ವಿದ್ಯಾರ್ಥಿಗಳು ಸತತ ಅಧ್ಯಯನದಿಂದ ಭವಿಷ್ಯ ರೂಪಿಸಿಕೊಳ್ಳಬೇಕು: ವಾಲಿಕಾರ

ಕೊಲ್ಹಾರ: ಜ್ಞಾನಾರ್ಜನೆಯಲ್ಲಿ ವಿದ್ಯಾರ್ಥಿಗಳು ಸಮಯಕ್ಕೆ ಹೆಚ್ಚಿನ ಮಹತ್ವ ನೀಡಿದಲ್ಲಿ ಉತ್ತಮ ಭವಿಷ್ಯ ರೂಪಸಿಕೊಳ್ಳಲು ಸಾಧ್ಯ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಅಭಿಪ್ರಾಯ ವ್ಯಕ್ತಪಡಿಸಿದರು.

ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಸ್ನೇಹ ಸಮ್ಮೇಳನ ಹಾಗು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಬಿಳ್ಕೋಡುವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಭಾವಂತ ವಿದ್ಯಾರ್ಥಿಗಳಾಗಬೇಕಾದರೆ ಜೀವನದಲ್ಲಿ ಸ್ಪಷ್ಟ ಗುರಿ ಜೊತೆಗೆ ನಿರಂತರ ಅಧ್ಯಯನದ ಅವಶ್ಯಕತೆ ಇದ್ದು. ವಿದ್ಯಾರ್ಥಿಗಳು ಸತತ ಅಧ್ಯಯನದಿಂದ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು, ಪಾಲಕರು ಸಹ ಮಕ್ಕಳ ವಿದ್ಯಾಭ್ಯಾಸದ ಕಡೆಗೆ ಗಮನ ಹರಿಸಬೇಕು ಎಂದರು.

ಶಿಕ್ಷಕ ಸಂಜಯ ದಿವಟಗಿ ಪ್ರಾಸ್ತಾವಿಕವಾಗಿ ಮಾತನಾಡಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಈ ಶಾಲೆಯಲ್ಲಿ ವಿದ್ಯಾಭ್ಯಾಸ ಪೂರೈಸಿ ಪರೀಕ್ಷೆಗೆ ಅಣಿಯಾಗುತ್ತಿದ್ದಾರೆ. ಶ್ರಮವಹಿಸಿ ಅಧ್ಯಯನ ಮಾಡಿದ್ದರಿಂದ ಉತ್ತಮ ಫಲಿತಾಂಶದೊಂದಿಗೆ ವಿದ್ಯಾರ್ಥಿಗಳು ತೇರ್ಗಡೆಯಾಗುವ ವಿಶ್ವಸವಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಕರಿಗೊಂಡ ಮಾತನಾಡುತ್ತಾ ಮಕ್ಕಳು ಪಠ್ಯಕ್ರಮದ ಅನುಸಾರ ಪರಿಪೂರ್ಣ ಶಿಕ್ಷಣ ನೀಡಲಾಗಿದೆ, ಅಭ್ಯಾಸದ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳಿಂದ ಮಕ್ಕಳು ಅನೇಕ ಬಹುಮಾನಗಳನ್ನು ಪಡೆದುಕೊಂಡು ಶಾಲೆಗೆ ಕೀರ್ತಿ ತಂದಿದ್ದಾರೆ ಎಂದರು.

ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು. ಭುವನೇಶ್ವರಿ ಮೇಟಿ, ವಿದ್ಯಾರ್ಥಿ ಪ್ರತಿನಿಧಿ ಸ್ಪಂದನಾ ವಾಲಿಕಾರ, ಎಸ್.ಜಿ ಗಡಾದ, ಬಿ.ಕೆ ಅಂದೋಡಗಿ, ಎಸ್.ಜಿ ಮೇತ್ರಿ, ಎಚ್.ಎಸ್ ಪಾಟೀಲ್, ಎಸ್.ಆರ್ ಬೀರುಣಗಿ, ಜೆ.ಎಮ್ ಬಿರಾದಾರ, ಎಸ್.ಪಿ ಕಂಬಾರ, ವಾಯ್.ಬಿ ಗಾಮಾ, ಪಿ.ಬಿ ಕೂಡಗಿ, ಶ್ರೀಮತಿ ದೇಸಾಯಿ ಉಪಸ್ಥಿತರಿದ್ದರು. ಆನಂದ ಲಮಾಣಿ ಸ್ವಾಗತಿಸಿದರು. ಬಿ.ಎಂ ಸಜ್ಜನ ನಿರೂಪಿಸಿದರು. ಸ್ಪಂದನಾ ವಾಲಿಕಾರ ವಂದಿಸಿದರು.

Leave a Reply

Your email address will not be published. Required fields are marked *

error: Content is protected !!