ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ (Valmiki Corporation Scam) ಪ್ರಕರಣಕ್ಕೆ ಸಂಬಂಧಪಟ್ಟಂತೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಿಬಿಐ ತನಿಖೆ (CBI probe) ಕೋರಿ ರಿಟ್ ಅರ್ಜಿ ಸಲ್ಲಿಸಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ (Karnataka High Court) ಮಹತ್ವದ ತೀರ್ಪು ಪ್ರಕಟಿಸಲಿದೆ.
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈ ಕೋರ್ಟ್ ತೀರ್ಪು ಕಾಯ್ದಿರಿಸಿತ್ತು .ಇದೀಗ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕ ಸದಸ್ಯ ಪೀಠವು ಇಂದು ತೀರ್ಪು ಪ್ರಕಟಿಸಲಿದೆ.
ಈಗಾಗಲೇ ಈ ಪ್ರಕರಣದಲ್ಲಿ ಹಲವು ಬೆಳವಣಿಗೆಗಳು ಆಗಿವೆ. ಜಾರಿ ನಿರ್ದೇಶನಾಲಯ ಈ ಪ್ರಕರಣದ ತನಿಖೆ ನಡೆಸುತ್ತಿದೆ. ಹಿಂದುಳಿದ ಕಲ್ಯಾಣ ಇಲಾಖೆ ಸಚಿವರಾಗಿದ್ದ ನಾಗೇಂದ್ರ ಅವರು ಈ ಪ್ರಕರಣಕ್ಕೆ ಸಂಬಂಧಿಸಿ ನಡೆದ ಭಾರೀ ವಿವಾದದಿಂದ ಒತ್ತಡ ಸೃಷ್ಟಿಯಾಗಿ ರಾಜೀನಾಮೆ ನೀಡಬೇಕಾಗಿ ಬಂದಿತ್ತು. ನಂತರ ಇವರ ಬಂಧನವೂ ಆಗಿದ್ದು, ಜಾಮೀನಿನ ಮೇಲೆ ಹೊರಗೆ ಬಂದಿದ್ದಾರೆ.
ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಬಿಐ ಎಂಟ್ರಿಯಾದರೆ ಈ ಪ್ರಕರಣದಲ್ಲಿ ಮತ್ತೆ ರಾಜ್ಯ ಸರ್ಕಾರ ಇಕ್ಕಟ್ಟಿಗೆ ಸಿಲುಕಲಿದೆ. ಪ್ರಕರಣದ ತನಿಖೆ ಸಿಬಿಐಗೆ ಹೋದರೆ ತನಿಖೆ ಆರ್ಥಿಕ ಇಲಾಖೆ ತನಕ ಬರಬಹುದು. ಬಿ ನಾಗೇಂದ್ರ ಮತ್ತು ಈ ಪ್ರಕರಣದಲ್ಲಿ ಭಾಗಿಯಾದ ಹಲವರಿಗೆ ಸಂಕಷ್ಟ ಕಟ್ಟಿಟ್ಟ ಬುತ್ತಿಯಾಗಲಿದೆ. ಈ ಪ್ರಕರಣದಲ್ಲಿ 89 ಕೋಟಿ ರೂಪಾಯಿ ದುರ್ಬಳಕೆಯಾಗಿದೆ. ನಿಮಗದ ಅಧಿಕಾರಿ ಚಂದ್ರಶೇಖರ್ ಎಂಬವರು ಈ ಕುರಿತು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು.
ಇದನ್ನೂ ಓದಿ: Self Harming: ಕೈಗಾ ಅಣುಸ್ಥಾವರದ ಅಧಿಕಾರಿ ಪಿಸ್ತೂಲ್‌ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ