Thursday, 21st November 2024

VAO Exam 2024: ಗ್ರಾಮಾಡಳಿತ ಅಧಿಕಾರಿ ನೇಮಕಾತಿ; ಕಡ್ಡಾಯ ಕನ್ನಡ ಪರೀಕ್ಷೆ ಕೀ ಉತ್ತರ ಪ್ರಕಟ

KEA Exam

ಬೆಂಗಳೂರು: 1000 ಗ್ರಾಮಾಡಳಿತ ಅಧಿಕಾರಿ ಹುದ್ದೆಗಳು (VAO Exam 2024) ಹಾಗೂ ಜಿಟಿಟಿಸಿ ಸಂಸ್ಥೆಯಲ್ಲಿನ ವಿವಿಧ ಹುದ್ದೆಗಳ ನೇಮಕಾತಿ ಭಾಗವಾಗಿ ಅ.26ರಂದು ನಡೆದ ಕಡ್ಡಾಯ ಕನ್ನಡ ಪರೀಕ್ಷೆಯ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಕಟಿಸಿದೆ. ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ನಲ್ಲಿ ಕೀ ಉತ್ತರಗಳನ್ನು ಪಡೆಯಬಹುದಾಗಿದೆ.

ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ. ಕಂದಾಯ ಇಲಾಖೆಯಲ್ಲಿನ ಗ್ರಾಮ ಆಡಳಿತ ಅಧಿಕಾರಿ ಮತ್ತು ಜಿಟಿಟಿಸಿ ಸಂಸ್ಥೆಯಲ್ಲಿನ ವಿವಿಧ ಹುದ್ದೆಗಳ ಆಯ್ಕೆಗೆ ಅ.26ರಂದು ಕಡ್ಡಾಯ ಕನ್ನಡ ಪರೀಕ್ಷೆ ನಡೆಸಲಾಗಿತ್ತು. ಈ ಪರೀಕ್ಷೆಯ ಕೀ ಉತ್ತರಗಳನ್ನು ಕೆಇಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಕೀ ಉತ್ತರಗಳಲ್ಲಿ ಏನಾದರೂ ಅಕ್ಷೇಪಣೆಗಳಿದ್ದರೆ ಅ.29ರ ಸಂಜೆ 5.30ರೊಳಗೆ ಸಲ್ಲಿಸಬೇಕು.

ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಪತ್ರಿಕೆ ವಿವರ, ಪರೀಕ್ಷಾ ದಿನಾಂಕ, ವರ್ಷನ್‌ ಕೋಡ್, ಪ್ರಶ್ನೆಗಳ ಸಂಖ್ಯೆ ಹಾಗೂ ಪೂರಕ ದಾಖಲೆಗಳನ್ನು ಪಿಡಿಎಫ್‌ ರೂಪದಲ್ಲಿ ಸಲ್ಲಿಸಬೇಕು. ಪ್ರತಿ ಆಕ್ಷೇಪಣೆಗೂ 50 ರೂ. ಸಲ್ಲಿಸಬೇಕು. ವಿಷಯ ತಜ್ಞರ ಸಮಿಯು ನಿರ್ಧರಿಸಿ ತೀರ್ಮಾನಿಸಿರುವ ಕೀ ಉತ್ತರಗಳು ಅಂತಿಮವಾಗಿರುತ್ತವೆ ಎಂದು ಕೆಇಎ ತಿಳಿಸಿದೆ.

KEA Exam 2024 Compulsory Kannada Exam Answer Key

ಕಡ್ಡಾಯ ಕನ್ನಡ ಪರೀಕ್ಷೆ ಕೀ ಉತ್ತರಗಳು ಮತ್ತು ಆಕ್ಷೇಪಣೆ ಸಲ್ಲಿಸುವ ಕೆಇಎ ವೆಬ್‌ಸೈಟ್‌ ಲಿಂಕ್‌ಗೆ https://cetonline.karnataka.gov.in/kea/vacrec24 ಇಲ್ಲಿ ಕ್ಲಿಕ್‌ ಮಾಡಿ

ಈ ಸುದ್ದಿಯನ್ನೂ ಓದಿ | Government Jobs: ಎಲ್ಲಾ ನೇಮಕಾತಿಗಳನ್ನು 3 ತಿಂಗಳು ಮುಂದೂಡಲು ರಾಜ್ಯ ಸರ್ಕಾರ ನಿರ್ಧಾರ; ಕಾರಣವೇನು?