ಬೆಂಗಳೂರು: ಅಕ್ಟೋಬರ್ 27ರಂದು ನಡೆದಿದ್ದ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ (VAO Exam 2024) ಪೇಪರ್-1 ಮತ್ತು ಪೇಪರ್-2ರ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಕಟಿಸಿದೆ. ಅಭ್ಯರ್ಥಿಗಳು ಕೆಇಎ ವೆಬ್ಸೈಟ್ನಲ್ಲಿ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ. ಅ. 27ರಂದು ನಡೆದ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಪತ್ರಿಕೆ-1 ಮತ್ತು ಪತ್ರಿಕೆ-2ರ ಕೀ-ಉತ್ತರಗಳನ್ನು ಕೆಇಎ ವೆಬ್ಸೈಟ್ನಲ್ಲಿ http://kea.kar.nic.ind ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಕೀ-ಉತ್ತರಗಳಿಗೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಪ್ರಾಧಿಕಾರದ ವೆಬ್ಸೈಟ್ನಲ್ಲಿ ಒದಗಿಸಲಾದ ಆನ್ಲೈನ್ ಲಿಂಕ್ನಲ್ಲಿ ಮಾತ್ರ ನ. 4ರ ಸಂಜೆ 5ರೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ.
ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಪತ್ರಿಕೆಯ ವಿವರ, ಪರೀಕ್ಷಾ ದಿನಾಂಕ, ವರ್ಷನ್ ಕೋಡ್, ಪ್ರಶ್ನೆ ಸಂಖ್ಯೆಗಳ ವಿವರಗಳನ್ನು ಹಾಗೂ ಪೂರಕ ದಾಖಲೆಗಳನ್ನು ಪಿಡಿಎಫ್ ರೂಪದಲ್ಲಿ ಸಲ್ಲಿಸಬೇಕು. ಸಲ್ಲಿಸಲಾಗುವ ಪ್ರತಿ ಆಕ್ಷೇಪಣೆಗಳಿಗೆ 50 ರೂ.ಗಳನ್ನು ಪಾವತಿಸಬೇಕು ಹಾಗೂ ಆಕ್ಷೇಪಣೆ ಶುಲ್ಕವನ್ನು ಹಿಂದಿರುಗಿಸಲಾಗುವುದಿಲ್ಲ. ಮೇಲ್ಕಂಡ ಮಾಹಿತಿಗಳನ್ನು ಸಲ್ಲಿಸದ ಅಥವಾ ಶುಲ್ಕ ಪಾವತಿಸದ ಅಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ವಿಷಯ ತಜ್ಞರ ಸಮಿತಿಯು ನಿರ್ಧರಿಸಿ ತೀರ್ಮಾನಿಸುವ ಕೀ-ಉತ್ತರಗಳು ಅಂತಿಮವಾಗಿರುತ್ತದೆ ಎಂದು ಕೆಇಎ ತಿಳಿಸಿದೆ.
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಪರೀಕ್ಷೆಯ ಕೀ ಉತ್ತರ ಹಾಗೂ ಆಕ್ಷೇಪಣೆ ಸಲ್ಲಿಸಲು ಕೆಇಎ ವೆಬ್ಸೈಟ್ನ https://cetonline.karnataka.gov.in/kea/vacrec24 ಈ ಲಿಂಕ್ ಕ್ಲಿಕ್ ಮಾಡಿ
VAO ಪರೀಕ್ಷೆ ಪತ್ರಿಕೆ-1ರ ಕೀ ಉತ್ತರಗಳು
VAO ಪರೀಕ್ಷೆ ಪತ್ರಿಕೆ-2ರ ಕೀ ಉತ್ತರಗಳು