Wednesday, 30th October 2024

ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮಕ್ಕೆ ಅಸ್ತು: ಸಿಎಂ ಬಿಎಸ್’ವೈ ಐತಿಹಾಸಿಕ ನಿರ್ಧಾರ

ಬೆಂಗಳೂರು: ಸ್ವಪಕ್ಷೀಯರು ಹಾಗೂ ಸಮುದಾಯ ಮುಖಂಡರ ಒತ್ತಾಯಕ್ಕೂ ಮಣಿದ ಸಿಎಂ ಬಿ.ಎಸ್.ಯಡಿಯೂರಪ್ಪ ನವರು ಮರಾಠಿ ಪ್ರಾಧಿಕಾರ ರಚನೆ ಬೆನ್ನಲ್ಲೇ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮ ಸ್ಥಾಪನೆಗೆ ಆದೇಶ ಹೊರಡಿಸಿದ್ದು, ಈ ಕುರಿತು ಸರ್ಕಾರದ ಮುಖ್ಯಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. ಈ ಮೂಲಕ ಎರಡು ದಶಕಗಳ ಬೇಡಿಕೆ ಈಡೇರಿದಂತಾಗಿದೆ.

ಶಿರಾ ಉಪಚುನಾವಣೆ ಸಂದರ್ಭದಲ್ಲಿ ಕಾಡುಗೊಲ್ಲರ ಮತಗಳ ಮೇಲೆ ಕಾಣ್ಣಿಟ್ಟು ಅವರಿಗಾಗಿಯೇ ಅಭಿವೃದ್ಧಿ ಪ್ರಾಧಿಕಾರ ರಚಿಸ ಲಾಗಿತ್ತು. ಬಸವಕಲ್ಯಾಣ ಉಪಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಆಗಿದೆ.

ಈ ಕುರಿತು ಡಿಸಿಎಂ ಲಕ್ಷ್ಮಣ ಸವದಿ ಮಾತನಾಡಿದ್ದು, ವೀರಶೈವ ಲಿಂಗಾಯತ ಸಮುದಾಯದ ಬಹು ದಿನಗಳ ಬೇಡಿಕೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಈಡೇರಿಸಿದ್ದಾರೆ. ಇದು ಸಂತಸದ ವಿಷಯ ಎಂದರು. ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೂ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ವಿಚಾರಕ್ಕೂ ಯಾವುದೇ ಸಂಬಂಧವಿಲ್ಲ. ಇದು ನಮ್ಮ ಹಲವು ವರ್ಷಗಳ ಬೇಡಿಕೆಯಾ ಗಿತ್ತು ಈಗ ಈಡೇರಿದೆ ಎಂದು ತಿಳಿಸಿದರು.

ವೀರಶೈವ ಲಿಂಗಾಯತ ಸಮುದಾಯದ ಅಭಿವೃದ್ಧಿಗೆ ಪ್ರಾಧಿಕಾರ ರಚನೆ ಮಾಡಬೇಕೆಂದು ಡಿಸಿಎಂ ಲಕ್ಷ್ಮಣ ಸವದಿ, ಸಚಿವರಾದ ವಿ.ಸೋಮಣ್ಣ, ಬಿ.ಸಿ.ಪಾಟೀಲ್, ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರು ಅವರಿದ್ದ ನಿಯೋಗ ಮುಖ್ಯಮಂತ್ರಿಗೆ ಮನವಿ ಮಾಡಿತ್ತು.