Saturday, 14th December 2024

ವಾರ್ಡ್‌ಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಎಚ್ಚರ ವಹಿಸಿ

ಸಿರವಾರ : ಮಳೆಗಾಲ ಪ್ರಾರಂಭವಾಗಿದ್ದು, ವಾರ್ಡ್‌ಗಳಲ್ಲಿ ನೀರು ಸಂಗ್ರಹವಾಗದಂತೆ ಎಚ್ಚರವಹಿಸಬೇಕು ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ ತಿಳಿಸಿದರು.

ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಪೌರಕಾರ್ಮಿಕರಿಗೆ ಡೆಂಗಿ ಹಾಗೂ ಮಲೇರಿಯಾ ಕುರಿತು ನಡೆದ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

ಎಲ್ಲಾ ವಾರ್ಡ್‌ಗಳಲ್ಲಿಯೂ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು. ನೈರ್ಮಲ್ಯದ ಕುರಿತು ಜನರಲ್ಲಿ ಅರಿವು ಮೂಡಿಸಿ ಮನೆಗೆ ಭೇಟಿ ನೀಡಿ ಸ್ವಚ್ಛತೆಯ ಕುರಿತು ಅರಿವು ಮೂಡಿಸ ಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾನ್ವಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಬು ಚಿನ್ನ, ಮಲೇರಿಯಾ ಮೇಲ್ವಿಚಾರಕ ಆಶಾ ಕಾರ್ಯಕರ್ತೆ ರಂಗಸ್ವಾಮಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀದೇವಿ, ಪಟ್ಟಣ ಪಂಚಾಯಿತಿ ಆರೋಗ್ಯ ನಿರೀಕ್ಷಕ ಅಧಿಕಾರಿ ಸುನಿತಾ, ಪೌರ ಕಾರ್ಮಿಕರು ಪಟ್ಟಣ ಹಾಗೂ ಪಂಚಾಯಿತಿ ಸಿಬ್ಬಂದಿ ಇದ್ದರು.