Friday, 22nd November 2024

Water Supply Cut: ಗಮನಿಸಿ, ಬೆಂಗಳೂರಿನಲ್ಲಿ ನ.14ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

Water Supply Cut

ಬೆಂಗಳೂರು: ಬೆಂಗಳೂರು ಜಲಮಂಡಳಿ ವತಿಯಿಂದ ತುರ್ತು ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ನ.14 ರಂದು ಬೆಳಗ್ಗೆ 10.30 ರಿಂದ 12.30 ಗಂಟೆಯವರೆಗೆ 2 ಗಂಟೆ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ (Water Supply Cut) ಎಂದು ಮಂಡಳಿ ತಿಳಿಸಿದೆ.

ನಗರದ ವೃಷಭಾವತಿ ವಿದ್ಯುತ್ ಸ್ಥಾವರದಿಂದ ತಾತಗುಣಿ ವಿದ್ಯುತ್ ಸ್ಥಾವರದ 220 ಕೆವಿ ವಿದ್ಯುತ್ ಮಾರ್ಗದಲ್ಲಿ ಹಲವು ಪರಿಕರಗಳನ್ನು ತುರ್ತಾಗಿ ಬದಲಾಯಿಸುವ ಹಾಗೂ ಕಾವೇರಿ ನೀರು ಸರಬರಾಜು ಯೋಜನೆಯ ಎಲ್ಲಾ ಹಂತಗಳ ಜಲರೇಚಕ ಯಂತ್ರಗಾರಗಳಲ್ಲಿ ಅಳವಡಿಸಲಾಗುತ್ತಿದ್ದು, ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸುದ್ದಿಯನ್ನೂ ಓದಿ | Pralhad Joshi: ಕೇಂದ್ರ ಸರ್ಕಾರದಿಂದ ಗ್ರಾಹಕರಿಗೆ ನೇರವಾಗಿ ಆಹಾರ ಧಾನ್ಯ ವಿತರಣೆ

ಬೆಂಗಳೂರಿನ ಈ ಪ್ರದೇಶಗಳಲ್ಲಿ ನ.13ರಂದು ವಿದ್ಯುತ್‌ ವ್ಯತ್ಯಯ

ಬೆಂಗಳೂರು ನಗರದ 66/11 ಕೆ.ವಿ. ಹೆಣ್ಣೂರು ರೋಡ್‌ ಉಪ-ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ನಗರದ ಹಲವೆಡೆ ನ.13 ರಂದು ಬುಧವಾರ ಬೆಳಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 3.30 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ.

ಈ ಸುದ್ದಿಯನ್ನೂ ಓದಿ | 45 Movie: ʼ45ʼ ಚಿತ್ರ ತಂಡದಿಂದ ನಿರ್ಮಾಪಕ ರಮೇಶ್ ರೆಡ್ಡಿ ಜನ್ಮ ದಿನಾಚರಣೆ

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ಹೆಣ್ಣೂರು ಬಂಡೆ, ಸಮುದ್ರಿಕಾ ಎನ್‌ಕ್ಲೇವ್, ಗ್ರೇಸ್ ಗಾರ್ಡನ್, ಕ್ರಿಸ್ಟ್ ಜಯಂತಿ ಕಾಲೇಜ್, ಕೆ. ನಾರಾಯಣಪುರ, ಬಿಳಿಶಿವಾಲೆ, ಆಶಾ ಟೌನ್‌ಶಿಪ್, ಐಶ್ವರ್ಯ ಲೇಔಟ್, ಮಾರುತಿ ಟೌನ್‌ಶಿಪ್, ನಗರಗಿರಿ ಟೌನ್‌ಶಿಪ್, ಕೆ.ನಾರಾಯಣಪುರ ಕ್ರಾಸ್, ಬಿ.ಡಿ.ಎಸ್. ಗಾರ್ಡನ್, ಕೊತನೂರು, ಪಟೇಲ್ ರಾಮಯ್ಯ ಲೇಔಟ್, ಅಂಜನಪ್ಪ ಲೇಔಟ್, ಸಿ.ಎಸ್.ಐ ಗೇಟ್, ಬೈರತಿ ಕ್ರಾಸ್, ಬೈರತಿ ಹಳ್ಳಿ, ಎವರ್ ಗ್ರೀನ್ ಲೇಔಟ್, ಕನಕ ಶ್ರೀ ಲೇಔಟ್, ಗೆದ್ದಲ ಹಳ್ಳಿ, ಬ್ಲೆಸ್ಸಿಂಗ್ ಗಾರ್ಡನ್, ಮಂತ್ರಿ ಅಪಾರ್ಟ್‌ಮೆಂಟ್, ಹಿರೇಮಠ ಲೇಔಟ್, ಟ್ರಿನಿಟಿ ಫಾರ್ಚೂನ್, ಮೈಕಲ್ ಸ್ಕೂಲ್, ಬಿ.ಎಚ್.ಕೆ. ಇಂಡಸ್ಟ್ರೀಸ್, ಜಾನಕೀ ರಾಮ್ ಲೇಔಟ್, ವಡ್ಡರ ಪಾಳ್ಯ, ಅನುಗ್ರಹ ಲೇಔಟ್, ಕಾವೇರಿ ಲೇಔಟ್, ಆತ್ಮ ವಿದ್ಯಾನಗರ, ಬೈರತಿ ಹಳ್ಳಿ, ಕೆ.ಆರ್.ಸಿ, ದೊಡ್ಡಗುಬ್ಬಿ ಕ್ರಾಸ್, ಕುವೆಂಪು ಲೇಔಟ್, ಸಂಗಮ್ ಎನ್‌ಕ್ಲೇವ್, ಬೈರತಿ ಬಂಡೆ, ನಕ್ಷತ್ರ ಲೇಔಟ್, ತಿಮ್ಮೇಗೌಡ ಲೇಔಟ್, ಆಂದ್ರ ಕಾಲೋನಿ, ಮಂಜುನಾಥ್ ನಗರ, ಹೊರಮಾವು ಬಿಬಿಎಂಪಿ, ಅಗರ ಗ್ರಾಮ, ಪಟಾಲಮ್ಮ ಟೆಂಪಲ್, ಎ.ಕೆ.ಆರ್ ಸ್ಕೂಲ್, ಹೊಸ ಮಿಲೇನಿಯಮ್ ಸ್ಕೂಲ್, ಲಕ್ಕಮ್ಮ ಲೇಔಟ್, ಪ್ರಕಾಶ್ ಗಾರ್ಡನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.