ಹೈದರಾಬಾದ್: ನಾಳೆಯಿಂದ ಮೂರು ದಿನ ರಾಜ್ಯದ ಹಲವೆಡೆ ಭಾರೀ ಮಳೆ(Weather Update)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆಂಧ್ರಪ್ರದೇಶ ಕರಾವಳಿಯ ಪಶ್ಚಿಮ ಬಂಗಾಳ ಕೊಲ್ಲಿಯ ಮೇಲಿನ ವಾಯುಭಾರ ಕುಸಿತ ಆಗಿರುವ ಕಾರಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ 24 ಗಂಟೆಗಳ ಕಾಲ ಕರ್ನಾಟಕದ ಒಳನಾಡಿನಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನ ಕಂಡುಬರಲಿದೆ. ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ಒಳನಾಡಿನ ಹಲವು ಕಡೆ ದಟ್ಟ ಮಂಜು ಇರುವ ಸಾಧ್ಯತೆಯಿದೆ. ಒಂದು ಕೂಡ ರಾಜ್ಯದಾದ್ಯಂತ ಒಣ ಹವೆ ಜೊತೆಗೆ ಭಾರಿ ಮಳೆಯಾಗಲಿದೆ.
ಯಾವ್ಯಾವ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ?
ಡಿಸೆಂಬರ್ 23ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆಯಿದೆ.
ಡಿಸೆಂಬರ್ 24ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಕಡೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.
ಬೆಂಗಳೂರು ನಗರ ಮತ್ತು ನೆರೆಹೊರೆಯ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿಗ್ರಿ ಸೆಲ್ಸಿಯಸ್ ಹಾಗೂ 18 ಡಿಗ್ರಿ ಸೆಲ್ಸಿಯಸ್ ಇರಬಹುದು. ಮುಂದಿನ ಎರಡು ದಿನಗಳವರೆಗೂ ಈ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವೇ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ನಷ್ಟು ಕಂಡುಬರಲಿದೆ ಎಂದು ಹೇಳಿದೆ.
ಈ ಸುದ್ದಿಯನ್ನೂ ಓದಿ: Sundar Pichai: ದೂರದೃಷ್ಟಿಯ ನಾಯಕ ನರೇಂದ್ರ ಮೋದಿ: ಗೂಗಲ್ ಸಿಇಒ ಸುಂದರ್ ಪಿಚೈ ಶ್ಲಾಘನೆ