Wednesday, 11th December 2024

Pralhad Joshi: ಮಮತಾ ಬ್ಯಾನರ್ಜಿ ಡ್ರಾಮಾ ಬಿಟ್ಟು ರಾಜೀನಾಮೆ ನೀಡಲಿ : ಪ್ರಲ್ಹಾದ್‌ ಜೋಶಿ

Mandya Violence

ಹುಬ್ಬಳ್ಳಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (West Bengal CM Mamata Banerjee) ರಾಜೀನಾಮೆ (Resignation) ನೀಡುವುದೇ ಒಳ್ಳೆಯದು ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಮಮತಾ ಅವರು ರಾಜೀನಾಮೆಯ ನಾಟಕವಾಡುತ್ತಿದ್ದಾರೆ ಎಂದು ಟೀಕಿಸಿದರು. ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಆಗಿ ಸರ್ಕಾರ ಮುನ್ನಡೆಸಲು ಅವರು ಸಮರ್ಥರಿಲ್ಲ. ಸಮರ್ಪಕ ಆಡಳಿತ ನೀಡುವಲ್ಲಿ ಅವರು ಅಸಮರ್ಥರಾಗಿದ್ದಾರೆ ಎಂದು ಜೋಶಿ ಪ್ರಕ್ರಿಯಿಸಿದರು.

ಈ ಸುದ್ದಿಯನ್ನೂ ಓದಿ | LIC: ರೈಲ್ವೆಯ ಐಆರ್‌ಸಿಟಿಸಿಯಲ್ಲಿ ಹೂಡಿಕೆ ಹೆಚ್ಚಿಸಿದ ಎಲ್‌ಐಸಿ

ಜನರಿಗೆ ನ್ಯಾಯ ಒದಗಿಸುವಲ್ಲಿ ಸಹ ವೈಫಲ್ಯ

ಅಧಿಕಾರ ನೀಡಿದ ಜನರಿಗೆ ನ್ಯಾಯ ಒದಗಿಸುವಲ್ಲಿ ಸಹ ವೈಫಲ್ಯ ಕಂಡಿದ್ದಾರೆ. ಸಮುದಾಯಕ್ಕೆ ಅವಮಾನ ಮಾಡುತ್ತಲೇ ಬಂದಿದ್ದಾರೆ. ಇದೇ ಪ್ರವೃತ್ತಿ ಮುಂದುವರಿಸುವ ಬದಲು ರಾಜೀನಾಮೆ ನೀಡುವುದೇ ಸೂಕ್ತ ಎಂದು ಪ್ರಲ್ಹಾದ್‌ ಜೋಶಿ ಅಭಿಪ್ರಾಯಿಸಿದರು.

ರಾಜೀನಾಮೆ ಹೇಳಿಕೆ ಕೇವಲ ಡ್ರಾಮಾ

ಮಮತಾ ಬ್ಯಾನರ್ಜಿ ಅವರ ರಾಜೀನಾಮೆ ಹೇಳಿಕೆ ಕೇವಲ ಡ್ರಾಮಾ. ಜನರೆದುರು ಈ ರೀತಿ ಕಣ್ಣಾ ಮುಚ್ಚಾಲೆ ಆಡುವುದು ಬೇಡ. ಬದಲಿಗೆ ರಾಜೀನಾಮೆ ನೀಡಲಿ ಎಂದು ಜೋಶಿ ಹೇಳಿದರು.

ಈ ಸುದ್ದಿಯನ್ನೂ ಓದಿ | Gold Rate: ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ; ಇಂದಿನ ದರ ಇಷ್ಟಿದೆ

ಅರವಿಂದ ಕೇಜ್ರಿವಾಲ್ ದೋಷಮುಕ್ತರಾಗಿಲ್ಲ

ಇನ್ನು, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರಿಗೆ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ಆದರೆ, ಅವರಿನ್ನೂ ದೋಷಮುಕ್ತರಾಗಿ ಹೊರ ಬಂದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಪ್ರತಿಕ್ರಿಯಿಸಿದರು.