Sunday, 28th April 2024

ರಾಜ್ಯದಲ್ಲಿ ರೈತರಿಗೆ ಅನ್ಯಾಯವಾಗಲು ನಾನು ಬಿಡುವುದಿಲ್ಲ: ಯಡಿಯೂರಪ್ಪ

ಬೆಂಗಳೂರು: ಎಪಿಎಂಸಿ ಯಾವುದೇ ಕಾರಣಕ್ಕೂ ಮುಚ್ಚಲ್ಲ. ಎಪಿಎಂಸಿ ಸಿಬ್ಬಂದಿ ಸಮಸ್ಯೆ ಬಗೆಹರಿಸುವೆ. ರಾಜ್ಯದಲ್ಲಿ ರೈತರಿಗೆ ಅನ್ಯಾಯವಾಗಲು ನಾನು ಬಿಡುವುದಿಲ್ಲ. ಒಂದು ವೇಳೆ ರೈತರಿಗೆ ಅನ್ಯಾಯವಾದರೆ ಅಧಿಕಾರಕ್ಕೆ ಅಂಟಿಕೊಂಡು ಕುಳಿತು ಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ರಾಜ್ಯಾದ್ಯಂತ ರೈತ ಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯುತ್ತಿರುವ ಹಿನ್ನಲೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರು ತಮ್ಮ ಉತ್ಪನ್ನಗಳು ಎಲ್ಲಿ ಬೇಕಾದರೂ ಮಾರಾಟ ಮಾಡ ಬಹುದು. ನಾವು ಎಪಿಎಂಸಿ ಮುಚ್ಚುತ್ತಿಲ್ಲ. ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದರು.

ನೀರಾವರಿ ಭೂಮಿಯನ್ನು ಖರೀದಿಸಿದವರು ಅದರಲ್ಲಿ ನೀರಾವರಿ ಕೃಷಿಯನ್ನೇ ಮಾಡಬೇಕು. ಇತರ ಚಟುವಟಿಕೆಗಳಿಗೆ ಉಪಯೋಗಿಸಬಾರದು. ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಅನಾನುಕೂಲವಾಗದು ಎಂದರು. ಕೃಷಿ ಜಮೀನನ್ನು ಕೈಗಾರಿಕೆಗಳಿಗೆ ಮಾರಾಟ ಮಾಡುವುದಿಲ್ಲ. ಆದರೆ ಅಭಿವೃದ್ದಿಗೆ ಕೈಗಾರಿಕೆಗಳ ಅಗತ್ಯವೂ ಇದೆ. ಯುವಜನರಿಗೆ ಉದ್ಯೋಗ ಸಿಗುತ್ತದೆ. ಬಂಜರು ಭೂಮಿಯನ್ನು ಮಾತ್ರ ಕೈಗಾರಿಕೆಗಳಿಗೆ ನೀಡಲಾಗುವುದು.  ಎಂದರು.

Leave a Reply

Your email address will not be published. Required fields are marked *

error: Content is protected !!