ಬೆಳಗಾವಿ: ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಉತ್ತರ ಕರ್ನಾಟಕದ ಶಕ್ತಿ ಕೇಂದ್ರ ಸುವರ್ಣ ವಿಧಾನಸೌಧ (Belagavi Suvarna Vidhana Soudha ) ಕಂಗೊಳಿಸುತ್ತಿದೆ. ಕರ್ನಾಟಕ ರಾಜ್ಯೋತ್ಸವ ಮತ್ತು ದೀಪಾವಳಿ ವೇಳೆ ಆಕರ್ಷಕ ಬೆಳಕಿನಲ್ಲಿ ಮಿಂದೆದ್ದ ಬೆಳಗಾವಿ, ಈಗ ಚಳಿಗಾಲದ ಅಧಿವೇಶನ ಮತ್ತು ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಿನ್ನೆಲೆ ವಿದ್ಯುತ್ ದೀಪಗಳಿಂದ ಮಿಂಚುತ್ತಿದೆ.
ಇಂದಿನಿಂದ ಡಿ.20ರವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿರುವ ಹಿನ್ನೆಲೆ ಸುವರ್ಣ ವಿಧಾನಸೌಧ, ಬೆಳಗಾವಿ ನಗರದ ಹೃದಯ ಭಾಗ ರಾಣಿ ಚೆನ್ನಮ್ಮ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಶ್ರೀಕೃಷ್ಣದೇವರಾಯ ವೃತ್ತ ಸೇರಿ 30 ವೃತ್ತಗಳನ್ನು ವಿದ್ಯುತ್ ದೀಪಗಳಿಂದ ಆಕರ್ಷಕವಾಗಿ ಅಲಂಕರಿಸಲಾಗಿದೆ. ಮೈಸೂರು ದಸರಾ ವೇಳೆ ದೀಪಾಲಂಕಾರ ಮಾಡುವ ತಂಡವೇ ಬೆಳಗಾವಿಯಲ್ಲೂ ವರ್ಣರಂಜಿತ, ಅಲಂಕಾರಿಕ ದೀಪಗಳಿಂದ ಬೆಳಗಾವಿ ನಗರದ ಪ್ರಮುಖ ವೃತ್ತ ಮತ್ತು ರಸ್ತೆಗಳನ್ನು ಅಲಂಕರಿಸಿದೆ.
ಇನ್ನು ಸುವರ್ಣಸೌಧದ ಹೆಬ್ಬಾಗಿಲಿನಲ್ಲಿನಲ್ಲಿ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಾದ ಶಕ್ತಿ ಯೋಜನೆ, ಗೃಹ ಲಕ್ಷ್ಮಿ ಯೋಜನೆ, ಗೃಹ ಜ್ಯೋತಿ, ಅನ್ನಭಾಗ್ಯ ಯೋಜನೆ ಹಾಗೂ ಯುವ ನಿಧಿ ಯೋಜನೆ ಹೆಸರುಗಳಿಂದ ಕೂಡಿದ ದೀಪಾಲಂಕಾರ ಸಾರ್ವಜನಿಕರನ್ನು ಆಕರ್ಷಿಸುತ್ತಿದೆ.
ಈ ಸುದ್ದಿಯನ್ನೂ ಓದಿ | Fashion Pageant News: ಯುವ ಜನರ ಮನ ಗೆದ್ದ ಮಿಸ್ & ಮಿಸೆಸ್ ಇಂಡಿಯಾ ರೋಲ್ ಮಾಡೆಲ್ ಪೇಜೆಂಟ್ 2024