ಬೆಳಗಾವಿ : ಕರೋನಾ ರೂಪಾಂತರಿ ಒಮಿಕ್ರಾನ್ ಸೋಂಕಿನ ಆತಂಕದ ನಡುವೆಯೇ ನಾಳೆ(ಸೋಮವಾರ)ಯಿಂದ ಬೆಳಗಾವಿ ಸುವರ್ಣ ವಿಧಾನಸೌಧ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ.
ಡಿ.13 ರಿಂದ 23ರವರೆಗೆ ಅಧಿವೇಶನ ನಡೆಯಲಿದ್ದು, ಈ ಮೂಲಕ ಸುವರ್ಣಸೌಧದಲ್ಲಿ 10 ನೇ ಬಾರಿ ವಿಧಾನಮಂಡಲ ಅಧಿವೇಶನ ನಡೆಯುತ್ತಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಬೆಳಗಾವಿಯದು ಚೊಚ್ಚಲ ಅಧಿವೇಶನವಾಗಿವೆ.
ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮತಾಂತರ ನಿಷೇಧ ವಿಧೇ ಯಕ ಮಂಡನೆ ಮಾಡುವಂತೆ ಧಾರ್ಮಿಕ ಮುಖಂಡರು ಹಾಗೂ ಮಠಾಧೀಶರು ಒತ್ತಡ ತಂದಿದ್ದು, ಈ ಹಿನ್ನೆಲೆಯಲ್ಲಿ ಮತಾಂತರ ನಿಷೇಧ ವಿಧೇಯಕದ ಕರಡು ಸಿದ್ದಪಡಿಸ ಲಾಗಿದ್ದು, ಕಾನೂನು ಪರಾಮರ್ಶೆ ನಡೆಸಲಾಗುತ್ತಿದೆ ಎನ್ನಲಾಗಿದೆ.
ಚಳಿಗಾಲದ ಅಧಿವೇಶನದಲ್ಲೇ ಮತಾಂತರ ನಿಷೇಧ ವಿಧೇಯಕ ಮಂಡನೆಗೆ ರಾಜ್ಯ ಸರ್ಕಾರ ಸಿದ್ದತೆ ನಡೆಸಿದ್ದು, ಮತಾಂತರ ನಿಷೇಧ ಸಂಬಂಧ ಕಟ್ಟುನಿಟ್ಟಿನ ಕ್ರಮ ಕೈ ಗೊಳ್ಳಲು ಅವಕಾಶ ಕಲ್ಪಿಸಲಾಗುತ್ತಿದೆ. ಮತಾಂತರ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸುವ ಅಂಶವನ್ನು ಸೇರ್ಪಡೆ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.