Sunday, 8th September 2024

ತನಗೆ ಬೇಕಾದುದನ್ನು ಧರಿಸುವುದು ಮಹಿಳೆಯ ಹಕ್ಕು: ಪ್ರಿಯಾಂಕಾ ಗಾಂಧಿ

ಬೆಂಗಳೂರು: ಬಿಕಿನಿಯಾಗಲಿ ಅಥವಾ ಹಿಜಾಬ್ ಆಗಲಿ ಬೇಕಾದುದನ್ನು ಧರಿಸುವುದು ಮಹಿಳೆಯ ಹಕ್ಕು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ಮತ್ತು ಕೇಸರಿ ಶಾಲು ಸಂಘರ್ಷದ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿ, ಅದು ಬಿಕಿನಿಯಾಗಿರಲಿ, ಘೂಂಘಾಟ್ (ಮುಸುಕು) ಆಗಿರಲಿ, ಜೀನ್ಸ್ ಆಗಿರಲಿ ಅಥವಾ ಹಿಜಾಬ್ ಆಗಿರಲಿ, ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು ಎಂದು ಹೇಳಿದ್ದಾರೆ.

ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ. #ಲಡ್ಕಿಹೂನ್‌ಲಡ್‌ಸಕ್ತಿಹೂನ್ ಎಂಬ ಹ್ಯಾಶ್ ಟ್ಯಾಗ್ ನೀಡಿ ಟ್ವೀಟ್ ಮಾಡಿದ್ದಾರೆ.

ರಾಜ್ಯದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ಸಂಘರ್ಷ ಕುಂದಾಪುರದಿಂದ ಬೇರೆ ಬೇರೆ ಜಿಲ್ಲೆಗಳಿಗೂ ವ್ಯಾಪಿಸಿದೆ.

ಕೆಲವೆಡೆ ಪ್ರತಿಭಟನೆ, ಕಲ್ಲು ತೂರಾಟ, ಮಾತಿನ ಚಕಮಕಿಯೂ ನಡೆದಿದೆ. ಪರಿಸ್ಥಿತಿ ಕೈಮೀರುವುದನ್ನು ಅರಿತ ರಾಜ್ಯ ಸರ್ಕಾರ 3 ದಿನಗಳ ಕಾಲ ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿದೆ.

error: Content is protected !!