Wednesday, 11th December 2024

ಯತ್ನಾಳ್‌ಗೆ ಶೀಘ್ರ ಗೇಟ್‌ಪಾಸ್ ನೀಡಲಾಗುವುದು: ಅರುಣ್ ಸಿಂಗ್

ಬೆಳಗಾವಿ : ಬಿಜೆಪಿಯಲ್ಲಿದ್ದುಕೊಂಡು ಶಾಸಕರಾಗಿ ಆಯ್ಕೆಯಾಗಿರುವ ಶಾಸಕ ಬಸನಗೌಡ ಯತ್ನಾಳ್‌ ಅವರು ತಮ್ಮದೇ ಪಕ್ಷದ ನಾಯಕರ ವಿರುದ್ದ ಕಿಡಿಕಾರುತ್ತಿರುವುದು ಈಗ ಹೈಕಮಾಂಡ್‌ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಈ ನಡುವೆ ಶಾಸಕ ಯತ್ನಾಳ್‌ ಶೀಘ್ರದಲ್ಲಿ ಬಿಜೆಪಿಯಿಂದ ಉಚ್ಚಾಟನೆ ಮಾಡ ಲಾಗುವುದು ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಅವರು ಶುಕ್ರವಾರ ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿ, ಆ ವ್ಯಕ್ತಿ ಬಗ್ಗೆ ನಾನು ಮಾತನಾಡುವುದಿಲ್ಲ, ಹೆಚ್ಚು ಮಾತನಾಡಿದರೆ ಹೆಚ್ಚು ಪ್ರಚಾರ ಸಿಗುತ್ತದೆ ಎಂದು ಹೇಳಿದರು.

ಪಕ್ಷದ ಮೇಲೆ ಅವರಿಗೆ 00.1 ಪರ್ಸೆಂಟ್‌ ಕೂಡ ನಂಬಿಕೆ ಇಲ್ಲ. ಇದೇ ವೇಳೆ ಅವರು ಯತ್ನಾಳ್ ಅವರನ್ನು ಬಿಜೆಪಿಯಿಂದ ಹೊರಹಾಕಲಾಗುವುದು ಎಂದರು.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily