Friday, 22nd November 2024

ರಾಜ್ಯದಲ್ಲಿ ಯೆಲ್ಲೋ ಅಲರ್ಟ್‌: ಮುಂದಿನ 5 ದಿನ ಮಳೆಯ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡು ಭಾಗದಲ್ಲಿ ಗುಡುಗು-ಸಿಡಿಲು ಸಹಿತ ಭಾನುವಾರ ವ್ಯಾಪಕ ಮಳೆಯಾ ಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಪೂರ್ವ ಮುಂಗಾರು ಶುರುವಾಗಿದೆ. ಮುಂಗಾರು ಮಾರುತಗಳು ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಪ್ರವೇಶಿಸಲಿವೆ. ಈ ಕಾರಣದಿಂದ ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.

ಭಾನುವಾರ ಬೆಳಗಾವಿ, ಗದಗ, ಧಾರವಾಡ ಮತ್ತು ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಾದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಭಾಗದಲ್ಲಿ ಹೆಚ್ಚು ಮಳೆಯಾಗಲಿದೆ.