Saturday, 5th October 2024

ಕರಾವಳಿ ಕರ್ನಾಟಕದಲ್ಲಿ ಇಂದು, ನಾಳೆ ಯೆಲ್ಲೋ ಅಲರ್ಟ್ 

ಬೆಂಗಳೂರು: ರಾಜ್ಯದಲ್ಲಿ ಜು.27 ಮತ್ತು 28ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ  ತಿಳಿಸಿದ್ದು, ಯೆಲ್ಲೋ ಅಲರ್ಟ್  ಘೋಷಿಸಲಾಗಿದೆ.

ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇದೇ 28ರವರೆಗೆ ಗುಡುಗು, ಸಿಡಿಲು ಸಹಿತ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು ಎರಡೂ ದಿನ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.

ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಜು.31ರವರೆಗೆ ಮಳೆ ಪ್ರಮಾಣ ಕಡಿಮೆ ಇರಲಿದೆ. ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ತಿಳಿಸಿದೆ.