ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಕೋರ್ಟ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿ, ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed ) ಅವರಿಗೆ ಸಂಕಷ್ಟ ಎದುರಾಗಿದೆ. ಸಚಿವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೂಚಿಸಿದ್ದಾರೆ.
ಮುಡಾ ಹಗರಣ ಸಂಬಂಧ ನ್ಯಾಯಾಲಯದ ಆದೇಶದ ಬಗ್ಗೆ ಸಚಿವ ಜಮೀರ್ ಅಹ್ಮದ್ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಾಹಂ ಅವರು ರಾಜ್ಯಪಾಲರಿಗೆ ದೂರು ನೀಡಿದ್ದರು. ಹೀಗಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ರಾಜ್ಯ ಅಡ್ವೋಕೇಟ್ ಜನರಲ್ ಅವರಿಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಕೋರ್ಟ್ ಆದೇಶ ನೀಡಿದ ಬಗ್ಗೆ ಪ್ರತಿಕ್ರಿಯಿಸಿದ್ದ ಜಮೀರ್ ಅಹ್ಮದ್ ಅವರು, ಇದು ರಾಜಕೀಯ ಪ್ರೇರಿತ ತೀರ್ಪು ಎಂದು ಹೇಳಿದ್ದರು. ಹೀಗಾಗಿ ಅವರ ವಿರುದ್ಧ ಹೈಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆಯಾಗಿತ್ತು.
ಸಿಎಂ ಸಿದ್ದರಾಮಯ್ಯ ಅವರನ್ನು ಸಮರ್ಥಿಸಿಕೊಳ್ಳುವ ಬರದಲ್ಲಿ ನ್ಯಾಯಾಲಯದ ಆದೇಶದ ಬಗ್ಗೆ ಲಘುವಾಗಿ ಮಾತನಾಡಿದ್ದ ಸಚಿವ ಜಮೀರ್ ಅಹ್ಮದ್ ಅವರ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ, ಹೈಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ಕೋರ್ಟ್ ಆದೇಶ ನೀಡಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಸಚಿವ ಜಮೀರ್ ಅಹ್ಮದ್ ಅವರು, ಇದು ರಾಜಕೀಯ ಪ್ರೇರಿತ ಕೋರ್ಟ್ ತೀರ್ಪು, ರಾಜಕೀಯ ಆದೇಶ ಎಂದು ಲಘುವಾಗಿ ಮಾತನಾಡಿದ್ದರು. ಹೀಗಾಗಿ ಅವರಿಗೆ ಸಂಕಷ್ಟ ಎದುರಾಗಿದೆ.
ಈ ಸುದ್ದಿಯನ್ನೂ ಓದಿ | Drug addiction: ಡ್ರಗ್ಸ್‌ಗೆ ದಾಸನಾದ ಮಗ; ಬೇಸತ್ತು ಕೊಲ್ಲಲು ಅನುಮತಿ ಕೇಳಿದ ತಾಯಿ!
ಭತ್ತ ಖರೀದಿ ಕೇಂದ್ರಗಳನ್ನು ಆರಂಭಿಸಲು ಸಿಎಂ ಸೂಚನೆ
ಬೆಂಗಳೂರು: ಬಳ್ಳಾರಿ, ಹೊಸಪೇಟೆ, ರಾಯಚೂರು, ಯಾದಗಿರಿ ಭಾಗದಲ್ಲಿ ಭತ್ತದ ಕೊಯ್ಲು ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಅಲ್ಲದೆ ಭತ್ತದ ಬೆಲೆ ಕುಸಿದಿರುವುದರಿಂದ ಭತ್ತದ ಖರೀದಿ ಕೇಂದ್ರಗಳನ್ನು (Paddy procurement centres) ಆರಂಭಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ರೈತರು ಆಗ್ರಹಿಸಿದ್ದರು. ಇದರ ಬೆನ್ನಲ್ಲೇ ಭತ್ತದ ಖರೀದಿ ಕೇಂದ್ರಗಳನ್ನು ಆರಂಭಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಕಂಪ್ಲಿ ಕ್ಷೇತ್ರದ ಶಾಸಕ ಗಣೇಶ್ ಹಾಗೂ ರೈತ ಮುಖಂಡರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಭತ್ತ ಖರೀದಿ ಕೇಂದ್ರಗಳನ್ನು ಆರಂಭಿಸುವಂತೆ ಮನವಿ ಮಾಡಿದ್ದಾರೆ. ಈ ವೇಳೆ ಅಧಿಕಾರಿಯೊಬ್ಬರೊಂದಿಗೆ ಫೋನ್‌ನಲ್ಲಿ ಸಂಪರ್ಕಿಸಿದ ಸಿಎಂ ಸಿದ್ದರಾಮಯ್ಯ ಅವರು, ಈ ಕೂಡಲೇ ಭತ್ತದ ಖರೀದಿ ಕೇಂದ್ರಗಳನ್ನು ಆರಂಭಿಸುವಂತೆ ಸೂಚಿಸಿದ್ದಾರೆ.
ಭತ್ತ ಕಟಾವು ಶುರುವಾಗಿದೆ, ಬೆಲೆ ಕುಸಿದು ರೈತರಿಗೆ ಸಂಕಷ್ಟ ಎದುರಾಗಿದೆ. ಹೀಗಾಗಿ ತಕ್ಷಣವೇ ಖರೀದಿ ಕೇಂದ್ರಗಳನ್ನು ಆರಂಭಿಸಬೇಕು. ಜನವರಿವರೆಗೆ ಕಾಯಬೇಡಿ ಎಂದು ಸೂಚನೆ ನೀಡಿದ್ದಾರೆ.