Tuesday, 9th August 2022

ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮಗೌಡ ಆಸ್ಪತ್ರೆಗೆ ದಾಖಲು

ಮಂಗಳೂರು: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಜನಪದ ಕಲಾವಿದೆ ಸುಕ್ರಿ ಬೊಮ್ಮಗೌಡ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಬಡಗೇರಿ ಗ್ರಾಮದ ಸುಕ್ರಿ ಬೊಮ್ಮಗೌಡ ಉಸಿರಾಟದ ಸಮಸ್ಯೆಯಿಂದ ಬಳಲು ತ್ತಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬುಡಕಟ್ಟು ಸಮುದಾಯವಾದ ಹಾಲಕ್ಕಿ ಒಕ್ಕಲಿಗ ಪಂಗಡಕ್ಕೆ ಸೇರಿದ ಸುಕ್ರಿ ಬೊಮ್ಮಗೌಡ ಹಾಲಕ್ಕಿ ಸಮುದಾಯವನ್ನು ಕೇಂದ್ರ ಸರ್ಕಾರ ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಹೋರಾಟ ಸಹ ಮಾಡುತ್ತಿದ್ದಾರೆ. ಸುಕ್ರಿ ಬೊಮ್ಮಗೌಡ ಹಾಲಕ್ಕಿ ಸಮಾಜದ ಸಾಂಸ್ಕೃತಿಕ ರಾಯಭಾರಿ ಎಂದೇ ಖ್ಯಾತರಾಗಿದ್ದಾರೆ.