ತುಮಕೂರು: ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ೨೦೨೩ರ ಚುನಾವಣೆಯಲ್ಲಿ ಮಾಜಿ ಶಾಸಕ ಸುರೇಶ್ಗೌಡ ಇಪ್ಪತ್ತೈದು ಸಾವಿರ ಅಂತರದಲ್ಲಿ ಗೆಲ್ಲುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

ವಿದ್ಯುತ್ ಶಕ್ತಿ ಗ್ರಿಡ್, ಶಾಲೆಗಳು, ರೈತರಿಗೆ ಉಪಯುಕ್ತವಾಗುವ ಪಂಪ್ ಸೆಟ್ಗಳಿಗೆ ವಿದ್ಯುತ್ ಪರಿವರ್ತಕ ಅಳವಡಿಕೆ ಸೇರಿ ಸರ್ಕಾರದ ಕಾರ್ಯಕ್ರಮವನ್ನು ಜನರಿಗೆ ಮುಟ್ಟಿಸುವ ಹಂಬಲ ಅವರಿಗಿದೆ.
ತಾತ್ಕಾಲಿಕವಾಗಿ ಅವರು ವಿಧಾನಸೌಧದಲ್ಲಿ ಇರದಿದ್ದರೂ ಕ್ಷೇತ್ರದ ಪ್ರತಿಯೊಬ್ಬ ಮತದಾ ರನ ಮನದಲ್ಲಿದ್ದಾರೆ ಎಂದರು. ಜನಸಾಮಾನ್ಯರಿಗೆ ಜನಪ್ರಿಯ ಶಾಸಕರು ಬೇಕಿಲ್ಲ.
ಜನೋಪಯೋಗಿ ಶಾಸಕರು ಬೇಕು. ಚುನಾವಣೆ ಮುಗಿಯುವ ಮುನ್ನವೇ ಜನಪ್ರಿಯ ಶಾಸಕರಾಗಿರುತ್ತಾರೆ. ಅಭಿವೃದ್ಧಿ ಚಕ್ರ ನಿರಂತರವಾಗಿ ತಿರುಗಬೇಕು. ನಿಮ್ಮ ಬದುಕಿನ ಗುಣಮಟ್ಟ ಹೆಚ್ಚಾಗಬೇಕು. ಸರ್ಕಾರದ ಯೋಜನೆ ಕಟ್ಟಕಡೆಯ ವ್ಯಕ್ತಿಗೂ ಮುಟ್ಟಬೇಕೆಂದರೆ ಸುರೇಶ್ಗೌಡರ ಕೈ ಹಿಡಿಯಬೇಕು. ದುಡಿಯುವ ವರ್ಗಕ್ಕೆ ಸಹಾಯ ಮಾಡಬೇಕು. ಅವರು ದೇಶವನ್ನು ಕಟ್ಟುತ್ತಾರೆ. ಎಸ್ಸಿ ಎಸ್ಟಿ ಮೀಸಲಾತಿಯನ್ನು ಹೆಚ್ಚು ಮಾಡಿದ್ದೇವೆ. ಎಲ್ಲ ವರ್ಗದವರಿಗೂ ವಿಶೇಷವಾದ ಹಣಕಾಸಿನ ಸಹಾಯ ಮಾಡುತ್ತಿದ್ದೇವೆ. ಸ್ತ್ರೀ ಶಕ್ತಿ ಸಂಘಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ. ಸಾವಿರ ಎಕರೆ ಇಂಡಸ್ಟ್ರಿಯಲ್ ಟೌನ್ಶಿಪ್ ಸ್ಥಾಪಿಸಲಿದ್ದೇವೆ. ಇದರಿಂದ ತುಮಕೂರು ಗ್ರಾಮೀಣ ಯುವಕರಿಗೆ ಸಹಕಾರಿಯಾಗಲಿದೆ ಎಂದರು.
ಮಾಜಿ ಶಾಸಕ ಸುರೇಶ್ಗೌಡ ಮಾತನಾಡಿ, ಗ್ರಾಮಾಂತರ ಕ್ಷೇತ್ರದ ಎಲ್ಲ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಜಾರಿಗೊಳಿಸ ಬೇಕು. ಹೆಬ್ಬೂರು-ಗೂಳೂರು ಹೋಬಳಿಗಳ ಕೆರೆಗಳಿಗೆ ನೀರು ತುಂಬಿಸಲು ಶಾಶ್ವತ ನೀರಾವರಿ ಯೋಜನೆ ಜಾರಿಗೆ ಅಗತ್ಯವಿದೆ ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ವೃಷಭಾವತಿಯಿಂದ ತುಮಕೂರು ಗ್ರಾಮಾಂತರ ಪ್ರದೇಶದ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಅನುಷ್ಠಾನ ಮಾಡ ಲಾಗುತ್ತಿದೆ. ಈ ಎರಡು ಯೋಜನೆಗಳನ್ನು ಇನ್ನೊಂದು ತಿಂಗಳಲ್ಲಿ ಅನುಷ್ಠಾನಗೊಳಿಸಬೇಕು ಎಂದು ಕೋರಿದರು.
ದೇವಿಗೆ ಖಡ್ಗ ನೀಡಿದ ಸಿಎಂ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಖಡ್ಗ ನೀಡಿ ಗೌರವಿಸಲಾಯಿತು. ನಂತರ ಮುಖ್ಯಮಂತ್ರಿಗಳು ಖಡ್ಗವನ್ನು ಗ್ರಾಮದೇವತೆಗೆ ಸಮರ್ಪಿಸಿದರು. ಸಿದ್ದಗಂಗಾ ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ, ಸಚಿವರಾದ ಗೋವಿಂದ ಕಾರಜೋಳ, ಗೋಪಾಲಯ್ಯ, ಬಿ.ಸಿ. ನಾಗೇಶ್, ಶಾಸಕರಾದ ಜ್ಯೋತಿಗಣೇಶ್, ಡಾ. ರಾಜೇಶ್ಗೌಡ ಮತ್ತಿತರರು ಉಪಸ್ಥಿತರಿದ್ದರು.