Friday, 7th May 2021

SSLC ಪರೀಕ್ಷೆ: ಪರಿಸ್ಥಿತಿ ಅವಲೋಕಿಸಿ ಸೂಕ್ತ ನಿರ್ಧಾರ- ಸುರೇಶ್‌ ಕುಮಾರ್‌

ಬೆಂಗಳೂರು: ಸಿಬಿಎಸ್‌ಸಿ (ಸೆಂಟ್ರಲ್‌ ಸಿಲೆಬಸ್‌) ಹತ್ತನೇ ತರಗತಿಗಳ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ SSLC ಪರೀಕ್ಷೆಗಳ ಕುರಿತು ಊಹಾಪೋಹ ಎದ್ದಿದೆ. ಆದರೆ, ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಈ ಕುರಿತು ಹೇಳಿಕೆ ನೀಡಿದ್ದಾರೆ.

ಮುಂಬರುವ ಜೂನ್‌ 21ರಿಂದ ರಾಜ್ಯದ SSLC ಪರೀಕ್ಷೆಗಳು ಪ್ರಾರಂಭವಾಗಲಿದೆ. ಆದರೆ ನಮ್ಮ ರಾಜ್ಯದಲ್ಲಿ CBSE ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *