ತಿರುಚಿರಾಪಳ್ಳಿ: ತಮಿಳುನಾಡಿನ ತಿರುಚಿರಾಪಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1,100 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿರುವ ಹೊಸ ಟರ್ಮಿನಲ್ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಉದ್ಘಾಟಿಸಿದರು. ತಿರುಚ್ಚಿ ವಿಮಾನ ನಿಲ್ದಾಣದ ಹೊಸ ಸಮಗ್ರ ಟರ್ಮಿನಲ್ ಕಟ್ಟಡದ ಸುಂದರವಾದ ಒಳಾಂಗಣದ ನೋಟ ನೋಡುಗರ ಗಮನ ಸೆಳೆಯುತ್ತಿದೆ. ಹೊಸ ಕಟ್ಟಡವನ್ನು 1,100 ಕೋಟಿ ರೂ.ಗೂ ಅಧಿಕ ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ವಾರ್ಷಿಕವಾಗಿ 4.4 ಮಿಲಿಯನ್ ಪ್ರಯಾಣಿಕರಿಗೆ ಸೇವೆ ಒದಗಿಸುವ ಸಾಮರ್ಥ್ಯ ಹೊಂದಿದೆ.