ನವದೆಹಲಿ: ಹರಿಯಾಣ ಕಾಂಗ್ರೆಸ್‌ನ ಮಾಜಿ ನಾಯಕ ಕುಲದೀಪ್ ಬಿಷ್ಣೋಯಿ ಅವರು ತಮ್ಮ ಪತ್ನಿ ರೇಣುಕಾ ಬಿಷ್ಣೋಯಿ ಅವರೊಂದಿಗೆ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ಸಮ್ಮುಖದಲ್ಲಿ ಗುರುವಾರ ಬಿಜೆಪಿಗೆ ಸೇರ್ಪಡೆಯಾದರು. ಮಾಜಿ ಮುಖ್ಯಮಂತ್ರಿ ಭಜನ್ ಲಾಲ್ ಅವರ ಪುತ್ರ ಕುಲದೀಪ್ ಬಿಷ್ಣೋಯಿ, ನಾಲ್ಕು ಬಾರಿ ಶಾಸಕರಾಗಿ ಮತ್ತು ಎರಡು ಸಲ ಸಂಸದರಾಗಿ ಆಯ್ಕೆಯಾಗಿದ್ದಾರೆ. ಅವರ ಪತ್ನಿ ರೇಣುಕಾ ಕೂಡ ಮಾಜಿ ಶಾಸಕಿ. ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಬಿಷ್ಣೋಯಿ ಅವರನ್ನು ಬಿಜೆಪಿಗೆ ಸ್ವಾಗತಿಸಿದ ಮುಖ್ಯಮಂತ್ರಿ ಖಟ್ಟರ್, ಬಿಷ್ಣೋಯಿ […]