ನವದೆಹಲಿ : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದಂತ ನಟಿ ರಾಗಿಣಿಗೆ ಕೊನೆಗೂ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. 140 ದಿನಗಳಿಂದ ಜೈಲಿನಲ್ಲಿದ್ದ ನಟಿ ರಾಗಿಣಿಗೆ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ. ನಟಿ ರಾಗಿಣಿ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳ ಗಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ನಟಿ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿತ್ತು. ಹೀಗಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇಂದು ಪ್ರಕರಣದ ವಿಚಾರಣೆ ನಡೆಸಿದಂತ ಕೋರ್ಟ್, ಕೊನೆಗೂ ಜಾಮೀನು ಮಂಜೂರು ಮಾಡಿದೆ.