ನವದೆಹಲಿ: ಮಾಲಿನ್ಯ ನಿಯಂತ್ರಿಸಲು ಮತ್ತು ವೃತ್ತಾಕಾರದ ಆರ್ಥಿಕತೆ ಉತ್ತೇಜಿಸಲು, ಕೇಂದ್ರ ರಸ್ತೆ ಸಾರಿಗೆ ಸಚಿವಾಲಯವು ಮೋಟಾರು ವಾಹನ ಕಾಯ್ದೆಯಲ್ಲಿ ತಿದ್ದುಪಡಿಯ ಅಧಿಸೂಚನೆ ಹೊರಡಿಸಿತು. 15 ವರ್ಷಕ್ಕಿಂತ ಹಳೆಯದಾದ ಎಲ್ಲಾ ಸರ್ಕಾರಿ ವಾಹನಗಳ ನೋಂದಣಿಯನ್ನು ಕಡ್ಡಾಯವಾಗಿ ರದ್ದುಗೊಳಿಸಲಾಗುತ್ತದೆ. ನೋಂದಣಿಯನ್ನು ನವೀಕರಿಸಿದ (15 ವರ್ಷಗಳ ನಂತರ) ವಾಹನಗಳನ್ನು ಸ್ವಯಂಚಾಲಿತವಾಗಿ ರದ್ದುಗೊಳಿಸಲಾಗಿದೆ ಎಂದು ಪರಿಗಣಿಸಲಾಗುತ್ತದೆ. ಕೇಂದ್ರ ಸರ್ಕಾರದ ವಾಹನಗಳು, ರಾಜ್ಯ ಸರ್ಕಾರದ ವಾಹನಗಳು, ಕೇಂದ್ರಾಡಳಿತ ಪ್ರದೇಶಗಳ ವಾಹನಗಳು, ನಿಗಮಗಳ ವಾಹನಗಳು, ರಾಜ್ಯ ಸಾರಿಗೆಯ ವಾಹನಗಳು, ಪಿಎಸ್‌ಯುಗಳ ವಾಹನಗಳು (ಸಾರ್ವಜನಿಕ ವಲಯದ ಉದ್ಯಮಗಳು) ಮತ್ತು […]