ನವದೆಹಲಿ: ಚುನಾವಣಾ ಆಯೋಗದ ನೂತನ ಆಯುಕ್ತರನ್ನಾಗಿ ಉತ್ತರ ಪ್ರದೇಶದ ಮಾಜಿ ಮುಖ್ಯ ಕಾರ್ಯದರ್ಶಿ ಅನೂಪ್ ಚಂದ್ರ ಪಾಂಡೆ ರನ್ನು ನೇಮಿಸಿ ಆದೇಶಿಸಲಾಗಿದೆ. ಚುನಾವಣಾ ಆಯೋಗದ ಮುಖ್ಯ ಆಯುಕ್ತರಾಗಿದ್ದ ಸುನಿಲ್ ಅರೋರಾ ಅವರು ಏಪ್ರಿಲ್ 12ರಂದು ನಿವೃತ್ತರಾಗಿದ್ದರು. ಆ ಸ್ಥಾನಕ್ಕೆ ಉತ್ತರ ಪ್ರದೇಶ ಕೇಡರ್‌ನ ನಿವೃತ್ತ ಐಎಎಸ್ ಅಧಿಕಾರಿ ಅನೂಪ್ ಚಂದ್ ಪಾಂಡೆ ಅವರನ್ನು ನೇಮಿಸಲಾಗಿದೆ. ಮೂರು ಸದಸ್ಯರ ಆಯೋಗದಲ್ಲಿ ಸುಶೀಲ್ ಚಂದ್ರ ಹಾಗೂ ರಾಜೀವ್ ಕುಮಾರ್ ಅವರು ಕಾರ್ಯ ನಿರ್ವಹಿಸುತ್ತಿದ್ದು, ಇನ್ನೊಬ್ಬ ಆಯುಕ್ತರ ಹುದ್ದೆ ಖಾಲಿ ಉಳಿದಿತ್ತು. […]