ನವದೆಹಲಿ: ಉಪರಾಷ್ಟ್ರಪತಿ ಜಗದೀಪ್ ಧನ್ ಕರ್ ರನ್ನು ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅಣಕಿಸಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಖಂಡಿಸಿದ್ದಾರೆ. “ನಮ್ಮ ಗೌರವಾನ್ವಿತ ಉಪರಾಷ್ಟ್ರಪತಿಯನ್ನು ಸಂಸತ್ತಿನ ಸಂಕೀರ್ಣದಲ್ಲಿ ಅವಮಾನಿಸಿದ ರೀತಿಯನ್ನು ಕಂಡು ನಾನು ದಿಗ್ಭ್ರಮೆಗೊಂಡೆ. ಚುನಾಯಿತ ಪ್ರತಿನಿಧಿಗಳು ತಮ್ಮನ್ನು ತಾವು ವ್ಯಕ್ತಪಡಿಸಿಕೊಳ್ಳಲು ಮುಕ್ತವಾಗಿರಬೇಕು. ಅವರ ಅಭಿವ್ಯಕ್ತಿ ಘನತೆ ಮತ್ತು ಸೌಜನ್ಯದ ಮಾನ ದಂಡಗಳೊಳಗೆ ಇರಬೇಕು. ಅದು ನಾವು ಹೆಮ್ಮೆಪಡುವ ಸಂಸದೀಯ ಸಂಪ್ರದಾಯವಾಗಿದೆ ಮತ್ತು ಭಾರತದ ಜನರು ಅದನ್ನು ಎತ್ತಿಹಿಡಿಯು ತ್ತಾರೆ ಎಂದು ನಿರೀಕ್ಷಿಸುತ್ತಾರೆ.” ಎಂದು ಬರೆದುಕೊಂಡಿದ್ದಾರೆ. ಜಗದೀಪ್ ಧನ್ […]