ಚಂಡೀಗಢ: ಜುಲೈ 1 ರಿಂದ ಪಂಜಾಬ್‌ನಲ್ಲಿ ಗೃಹ ಬಳಕೆಗಾಗಿ ಉಚಿತ 300 ಯೂನಿಟ್ ವಿದ್ಯುತ್ ಪೂರೈಕೆ ಮಾಡು ವುದಾಗಿ ಆಮ್ ಆದ್ಮಿ ಪಕ್ಷ ಶನಿವಾರ ಘೋಷಣೆ ಮಾಡಿದೆ. ಮುಖ್ಯಮಂತ್ರಿ ಭಗವಂತ ಮಾನ್ ಅಧಿಕಾರ ವಹಿಸಿಕೊಂಡ ತಿಂಗಳಲ್ಲೇ ಈ ಮಹತ್ವದ ಘೋಷಣೆ ಮಾಡಿದ್ದಾರೆ. ಘೋಷಣೆಗೂ ಮುನ್ನ ಗುರುವಾರ ಮುಖ್ಯಮಂತ್ರಿ ಭಗವಂತ ಮಾನ್ ದೆಹಲಿಗೆ ತೆರಳಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜೊತೆ ಉಚಿತ ವಿದ್ಯುತ್ ಪೂರೈಕೆ ಯೋಜನೆ ಕುರಿತು ಚರ್ಚೆ ನಡೆಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮೂಲಗಳು ತಿಳಿಸಿವೆ. […]