ಲಖನೌ: ರೈತರ ವಿರುದ್ಧದ ಸುಮಾರು 900 ಕೇಸ್ ಗಳನ್ನು ಹಿಂತೆಗೆದುಕೊಳ್ಳಲು ಯೋಗಿ ಆದಿತ್ಯನಾಥ್ ಸರ್ಕಾರ ನಿರ್ಧರಿಸಿದೆ. ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ಯೋಗಿ ಸರಕಾರ ಆದೇಶ ಹೊರಡಿಸಿದೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ( ಗೃಹ) ಅವನಿಶ್ ಅವಾಸ್ತಿ ರೈತರ ಮೇಲಿನ ಕೇಸ್ ಹಿಂಪಡೆಯುವ ಆದೇಶವನ್ನು ಹೊರಡಿಸಿದ್ದಾರೆ. ಪೈರನ್ನು ಸುಡುವ ಮೂಲಕ ಪರಿಸರ ಮಾಲಿನ್ಯಕ್ಕೆ ಕಾರಣವಾದ ಆರೋಪದ ಮೇರೆಗೆ ರೈತರ ಮೇಲೆ ಕೇಸ್ ಹಾಕಲಾಗಿತ್ತು. ರಾಜ್ಯದ ಆರ್ಥಿಕತೆ ಮತ್ತು ಅಭಿವೃದ್ಧಿಯಲ್ಲಿ ರೈತರು ಪ್ರಮುಖ ಪಾತ್ರ […]