ನವದೆಹಲಿ: ಪಕ್ಷದ ರಾಮರಾಜ್ಯ ಪರಿಕಲ್ಪನೆ ಪ್ರದರ್ಶಿಸುವ ‘ಆಪ್ ಕಾ ರಾಮರಾಜ್ಯ’ ವೆಬ್‌ಸೈಟ್ ಅನ್ನು ಆಮ್ ಆದ್ಮಿ ಪಕ್ಷ ಬುಧವಾರ ಲೋಕಾರ್ಪಣೆ ಮಾಡಿತು. ವೆಬ್‌ಸೈಟ್ ಬಿಡುಗಡೆ ಬಳಿಕ ಮಾತನಾಡಿದ ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್, ಈ ವೆಬ್‌ಸೈಟ್ ಎಎಪಿಯ ರಾಮರಾಜ್ಯ ಪರಿಕಲ್ಪನೆಯನ್ನು ಮತ್ತು ಪಕ್ಷ ಮಾಡಿದ ಕೆಲಸಗಳ ಬಗ್ಗೆ ಮಾಹಿತಿ ನೀಡುತ್ತದೆ ಎಂದರು. ‘ಕಳೆದ 10 ವರ್ಷಗಳಲ್ಲಿ ರಾಮರಾಜ್ಯ ಪರಿಕಲ್ಪನೆ ಸಾಕಾರಗೊಳಿಸಲು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ದೆಹಲಿಯಲ್ಲಿ ಅದ್ಭುತವಾದ ಕೆಲಸಗಳನ್ನು ಮಾಡಿದ್ದಾರೆ. ಉತ್ತಮ ಶಾಲೆಗಳು, ಮೊಹಲ್ಲಾ ಚಿಕಿತ್ಸಾಲಯಗಳು, […]