ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕರನ್ನು ಖರೀದಿಸಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಯತ್ನಿಸುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿ ದಂತೆ ನೋಟಿಸ್ ಜಾರಿ ಮಾಡಲು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸಕ್ಕೆ ನೋದೆಹಲಿ ಪೊಲೀಸ್ ಅಪರಾಧ ದಳ ಶನಿವಾರ ಭೇಟಿ ನೀಡಿದೆ. ದೆಹಲಿ ಪೊಲೀಸ್ ಅಪರಾಧ ದಳ, ಶುಕ್ರವಾರ ಸಂಜೆಯೂ ಕೇಜ್ರಿವಾಲ್ ನಿವಾಸಕ್ಕೆ ಭೇಟಿ ಕೊಟ್ಟಿತ್ತು. ಆದರೆ ಕೇಜ್ರಿವಾಲ್ ನಿವಾಸದ ಅಧಿಕಾರಿಗಳು ಅದನ್ನು ಸ್ವೀಕರಿಸಲು ನಿರಾಕರಿಸಿದ್ದರಿಂದ ನೋಟಿಸ್ ನೀಡಲು ಸಾಧ್ಯವಾಗಲಿಲ್ಲ ಎಂದು ಮೂಲಗಳು ತಿಳಿಸಿವೆ. […]