ಸಮಲ್ಕ (ಹರ್ಯಾಣ): ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖೀಲ ಭಾರತ ಪ್ರತಿನಿಧಿಸಭಾ, ಭಾನುವಾರ ಹರ್ಯಾಣದ ಸಮಲ್ಕದಲ್ಲಿ ಆರಂಭವಾಗಲಿದೆ. ಸರಸಂಘಚಾಲಕ ಮೋಹನ್ ಭಾಗವತ್, ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಸೇರಿದಂತೆ ಒಟ್ಟು 1,400 ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಕೂಡ ಪಾಲ್ಗೊಳ್ಳಲಿದ್ದಾರೆ. ಸಂಘದ ಪರಿವಾರ ಸಂಘಟನೆಯ ಆಯ್ದ 34 ನಾಯಕರಿಗೂ ಪಾಲ್ಗೊಳ್ಳಲು ಅವಕಾಶವಿದೆ. ಈ ಸಭೆಯಲ್ಲಿ ದೇಶದಲ್ಲಿ ಸಾಮಾಜಿಕ ಸಾಮರಸ್ಯ ಮೂಡಿಸುವುದು, ಜನರು ತಮ್ಮ ಕರ್ತವ್ಯವನ್ನು ಚೆನ್ನಾಗಿ ನಿರ್ವಹಿಸುವಂತೆ ಪ್ರೇರಿಸುವುದು, ಅವರನ್ನು ಸ್ವಾವಲಂಬಿಗಳನ್ನಾಗಿಸುವ ಬಗ್ಗೆ ಚರ್ಚೆ ನಡೆಯಲಿದೆ.
ತುಮಕೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಹೆಚ್ಚಿಸಿರುವ ವಿದ್ಯಾರ್ಥಿಗಳ ಶುಲ್ಕವನ್ನು ಕಡಿಮೆಗೊಳಿಸಬೇಕು ಎಂದು ಆಗ್ರಹಿಸಿ ಎಬಿವಿಪಿ ವತಿಯಿಂದ ಮಂಗಳವಾರ ಪ್ರತಿಭಟಿಸ ಲಾಯಿತು. ಬಿಜಿಎಸ್ ವೃತ್ತದಿಂದ ಅಶೋಕ ರಸ್ತೆ ಮೂಲಕ...
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಹತ್ಯೆ ಪ್ರಕರಣಗಳನ್ನು ಖಂಡಿಸಿರುವ ಎಬಿವಿಪಿ ಕಾರ್ಯಕರ್ತರು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದು, ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ...
ಗಂಗಾವತಿ: ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಬಂಧನ ಖಂಡಿಸಿ ಎಬಿವಿಪಿ ಕಾರ್ಯಕರ್ತರು ಶನಿವಾರ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಎಂ.ರೇಣುಕಾ ಅವರಿಗೆ...