ಕಾಬೂಲ್: ಅಫ್ಘಾನಿಸ್ತಾನದಲ್ಲಿ 5.6 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, 12 ಮಂದಿ ಮೃತಪಟ್ಟಿದ್ದಾರೆ. ಭೂಕಂಪದ ತೀವ್ರತೆ 5.3 ಆಗಿತ್ತು. ಭೂಕಂಪದಲ್ಲಿ ಬಲಿಯಾದವರಲ್ಲಿ ಮಹಿಳೆಯರು ಮತ್ತು ಮಕ್ಕಳು ಕೂಡ ಸೇರಿದ್ದಾರೆ. ಪಶ್ಚಿಮ ಪ್ರಾಂತ್ಯದ ಬದ್ಸ್ಗೀಸ್ನ ಖಾದಿಸ್ ಜಿಲ್ಲೆಯಲ್ಲಿ 5.6 ತೀವ್ರತೆಯ ಭೂಕಂಪನ ಉಂಟಾಗಿದೆ. ಇದರಿಂದ ಮನೆಗಳ ಮೇಲ್ಚಾವಣಿ ಕುಸಿದ ಘಟನೆಗಳಲ್ಲಿ 12 ಮಂದಿ ಪ್ರಕೃತಿ ವಿಕೋಪಕ್ಕೆ ಬಲಿಯಾಗಿದ್ದಾರೆ. ಅಲ್ಲದೇ ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಜಿಲ್ಲಾ ಗವರ್ನರ್ ಮೊಹಮ್ಮದ್ ಸಲೇಹ್ ಪುರ್ಡೆಲ್ ತಿಳಿಸಿದ್ದಾರೆ. ಇದೇ ಜನವರಿ 1 ರಂದು […]